ರಾಜ್ಯ ಬಿಜೆಪಿ ವಿರುದ್ಧ ಮತ್ತೆ ಗುಡುಗಿದ ಕೆ.ಎಸ್ ಈಶ್ವರಪ್ಪ

Update: 2024-05-28 11:20 GMT

ಮಂಗಳೂರು: ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ರಘುಪತಿ ಭಟ್ ಪರ ಅವರು ಮತ ಯಾಚಿಸಿ ಮಾತನಾಡಿದ ಅವರು, ಬಿಜೆಪಿ ದೇಶದಲ್ಲಿ ಒಂದು ಸಿದ್ದಾಂತವನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದೆ. ಆದರೆ ಕರ್ನಾಟಕದಲ್ಲಿ ಇದಕ್ಕೆ ತಿಲಾಂಜಲಿ ಇಟ್ಟು ಬಿಜೆಪಿ ನಡೆದುಕೊಳ್ಳುತ್ತಿದೆ.  ಆದರೆ ಕಾಂಗ್ರೆಸ್ ಸಂಸ್ಕೃತಿ ಕರ್ನಾಟಕ ಬಿಜೆಪಿಯಲ್ಲಿ ಬಂದಿರೋದು ನೋವು ತಂದಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆಗೆ ಸರಿಯುತ್ತಿರುವ ಸಂದರ್ಭ, ಪಕ್ಷ, ಹಿಂದುತ್ವ ಎಂದು ಬಯಸುವ ಎಲ್ಲ ಕಾರ್ಯಕರ್ತರು ರಘುಪತಿ ಭಟ್ ಪರ ಕೆಲಸ ಮಾಡಬೇಕು. ಬಿಜೆಪಿ ಶುದ್ಧೀಕರಣ ಆಗಬೇಕು. ರಘುಪತಿ ಗೆಲ್ಲುತ್ತಾರೆ. ಹಿಂದುತ್ವಕ್ಕೆ ಆಗುತ್ತಿರುವ ಅವಮಾನ, ರಘುಪತಿ ಭಟ್ ಹಾಗೂ ನನಗೆ ಆಗಿರುವ ಅನ್ಯಾಯ ಬಗ್ಗೆ ಎಲ್ಲರೂ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ನಿಂದ ಬಂದ ಅಭ್ಯರ್ಥಿ ಗೆ ಟಿಕೆಟ್ ನೀಡಿರುವುದಕ್ಕೆ ಅರ್ಥವೇ ಇಲ್ಲ. ಹಿಂದುತ್ವದ ನೆಲೆ ಸ್ವಾರ್ಥಿಗಳ ಕೈ ಸೇರಿದೆ. ಇದನ್ನು ಮತ್ತೆ ಪಡೆಯಲು ಎಲ್ಲರೂ ಕೆಲಸ ಮಾಡಬೇಕು ಎಂದರು.

ಇದು ವಿಶೇಷವಾದ ಚುನಾವಣೆ. ಬಿಜೆಪಿ ದೇಶದಲ್ಲಿ ಒಂದು ಸಿದ್ದಾಂತದಲ್ಲಿ ಕಾರ್ಯ ನಿರ್ವ ಹಿಸುತ್ತಿದ್ದರೆ ರಾಜ್ಯದಲ್ಲಿ ಅದಕ್ಕೆ ತಿಲಾಂಜಲಿ ಇಟ್ಟು ಕಾರ್ಯ ನಿರ್ವಹಿಸುತ್ತಿದೆ. ಜನತಾ ಪಕ್ಷ ಕಟ್ಟಿದ್ದು ಇತಿಹಾಸ. ವಿಶ್ವವನ್ನು ಒಂದು ಗೂಡಿ ಸುವ ನಿಟ್ಟಿನಲ್ಲಿ ಕಾಂಗ್ರೆಸ್ ನ ಕುಟುಂಬ ರಾಜಕೀಯದ ವಿರುದ್ಧ ಕೆಲಸ ಆಗುತ್ತಿದ್ದರೆ, ಕರ್ನಾಟಕದಲ್ಲಿ ಬಿಜೆಪಿ ಅಪ್ಪ ಮಕ್ಕಳ ಕೈಯಲ್ಲಿದೆ. ಇದರ ನೋವಲ್ಲಿ ಕಾರ್ಯಕರ್ತರಿದ್ದಾರೆ ಎಂದರು.

ರಾಜ್ಯದಲ್ಲಿ ಹಿಂದುತ್ವ, ರೈತ, ರಾಷ್ಟ್ರೀಯತೆಯ ಹೋರಾಟದಿಂದ ಜಾತೀಯತೆಗೆ ಮುಟ್ಟಿದೆ. ಸಾಮೂಹಿಕದಿಂದ ಕೌಟುಂಬಿಕ ನೆಲೆಗೆ ತಲುಪಿದೆ. ವಿಧಾನಸಭಾ ಚುನಾವಣೆಯ ವೇಳೆಯೂ 45 ವರ್ಷಗಳಿಂದ ನನ್ನ ಜೊತೆ ಕೆಲಸ ಮಾಡಿದ ಉಡುಪಿಯ ರಘುಪತಿ ಭಟ್ ಗೆ ನೋವಾಗಿದೆ. ನನಗಾದರೂ ದೆಹಲಿಯಿಂದ ಕರೆ ಬಂದಿತ್ತು. ರಘುಪತಿ ಭಟ್ ಗೆ ಅದೂ ಬಂದಿಲ್ಲ. ಅವರು ಪಕ್ಷ ನಿಷ್ಠೆ ಬಿಟ್ಟಿಲ್ಲ. ಈ ಚುನಾವಣೆಯಲ್ಲಿ ಮತ್ತೆ ಅನ್ಯಾಯವಾಗಿದೆ. ನಕ್ಸಲರು , ಕಮ್ಯುನಿಸ್ಟ್ ಜೊತೆ ಶಾಂತಿಗಾಗಿ ನಡಿಗೆ ನಡೆಸಿದ್ದ ಇತ್ತೀಚೆಗೆ ಪಕ್ಷ ಸೇರಿದ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ. ಇದರ ನೋವು ಕಾರ್ಯಕರ್ತರಿಗೂ ಇದೆ ಎಂದು ಹೇಳಿದರು.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News