ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ಮೋಹಿನಿ ನಿಧನ
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ವರಕಬೆ ನಿವಾಸಿ ಗ್ರಾ.ಪಂ ಸದಸ್ಯೆ ಮೋಹಿನಿ (42) ಶುಕ್ರವಾರ ರಾತ್ರಿ ನಿಧನರಾದರು. ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇವರು ಕಳೆದ ಗ್ರಾಮ ಪಂಚಾಯತು ಚುನಾವಣೆಯಲ್ಲಿ ಎಸ್‌ಡಿಪಿಐ ಬೆಂಬಲಿತರಾಗಿ ಪಿಲಿಚಾಮುಂಡಿಕಲ್ಲು 1ನೇ ವಾರ್ಡ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಪಂಚಾಯತು ಸದಸ್ಯರಾಗಿ ಆಯ್ಕೆಯಾಗಿದ್ದರು.
ಮೃತರು ಪತಿ ಮೋನಪ್ಪ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಮೋಹಿನಿಯವರ ನಿಧನಕ್ಕೆ ಎಸ್.ಡಿ.ಪಿ.ಐ ಜಿಲ್ಲಾ ಕಾರ್ಯದರ್ಶಿಅಕ್ಬರ್ ಬೆಳ್ತಂಗಡಿ, ಬೆಳ್ತಂಗಡಿ ಸಮಿತಿ ಅಧ್ಯಕ್ಷ ನವಾಝ್ ಕಟ್ಟೆ, ಉಪಾಧ್ಯಕ್ಷ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಕುವೆಟ್ಟು ಬ್ಲಾಕ್ ಅಧ್ಯಕ್ಷ ಅಬ್ದುಲ್ ರವೂಫ್ ಪುಂಜಾಲಕಟ್ಟೆ, ಗ್ರಾಮ ಪಂಚಾಯತ್ ಸದಸ್ಯರಾದ ಮುಸ್ತಫಾ, ಶಮೀರ್, ಆಮೀನ, ಮೈಮುನಾ ಹಾಗೂ ಇತರ ನಾಯಕರು ಭಾಗವಹಿಸಿ ಅಂತಿಮ ವಿಧಿವಿಧಾನದಲ್ಲಿ ನೆರವಾಗಿ ಕುಟುಂಬಸ್ಥರಿಗೆ ಸಾಂತ್ವನ ನೀಡಿದರು.