ಶಾಲೆಗಳಿಗೆ ರಜೆ ಸಂಬಂಧಿಸಿದ ನಕಲಿ ಆದೇಶ ಪತ್ರ ವೈರಲ್: ಕಾನೂನು ಕ್ರಮದ ಎಚ್ಚರಿಕೆ ನೀಡಿದ ದ.ಕ ಜಿಲ್ಲಾಧಿಕಾರಿ
Update: 2023-07-26 15:40 GMT
ಮಂಗಳೂರು : ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯ ಮೊಹರು, ಸಹಿ ಹೊಂದಿದ ನಕಲಿ ಆದೇಶ ಪತ್ರವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯ ಬಿಟ್ಟ ಪ್ರಸಂಗ ಇಂದು ರಾತ್ರಿ ನಡೆದಿದೆ.
ಈ ಸಂಬಂಧ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಇಂತಹ ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.