ಲೋಕಸಭಾ ಚುನಾವಣೆ: ದ.ಕ ಜಿಲ್ಲೆಯಲ್ಲಿ ಬಿರುಸಿನ ಮತದಾನ
ಮಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ.
ಮತದಾರರು ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು, ದ.ಕ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಪಿತಾನಿಯೊ 179 ನೇ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ತಮ್ಮ ಹಕ್ಕು ಚಲಾಯಿಸಿದರು.
ಉಡುಪಿ ಚಿಕ್ಕಮಗಳೂರು ಹಾಸನ ಮತ್ತು ದ.ಕ ಜಿಲ್ಲೆಯ ವಿವಿಧ ಮೊಹಲ್ಲಾಗಳ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಮಾಣಿ ಸರಕಾರಿ ಪ್ರಾಥಮಿಕ ಶಾಲಾ ಮತಗಟ್ಟೆಯಲ್ಲಿ ಲೋಕಸಭಾ ಚುನಾವಣೆಯ ಮತದಾನ ಮಾಡಿದರು.
ಮಂಗಳೂರು ನಗರದ ಬಲ್ಮಠದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮತಗಟ್ಟೆ 131ರಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪತ್ನಿಯೊಂದಿಗೆ ಬಂದು ತಮ್ಮ ಹಕ್ಕು ಚಲಾಯಿಸಿದರು.
ಮುಡಿಪು ಸಮೀಪದ ಬೋಳಿಯಾರ್ ಜಾರದಗುಡ್ಡೆ ಮತಗಟ್ಟೆಯಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಪತ್ನಿ ಲಮೀಸ್ ಖಾದರ್ ಹಾಗೂ ಪುತ್ರಿ ಹವ್ವಾ ನಸೀಮಳೊಂದಿಗೆ ಆಗಮಿಸಿ ಮತಚಲಾಯಿಸಿದರು.
ಮಂಗಳೂರಿನ ಬೊಕ್ಕಪಟ್ನ ಯುಬಿಎಂಸಿ ಅಂಗನವಾಡಿ ಕೇಂದ್ರದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರು ಹಾಜಿ ಕೆ.ಎಸ್ ಮುಹಮ್ಮದ್ ಮಸೂದ್ ಅವರು ತಮ್ಮ ಹಕ್ಕು ಚಲಾಯಿಸಿದರು.
ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಎಸ್ ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಲೆಯ 164 ಮತಗಟ್ಟೆಯಲ್ಲಿ ಪತ್ನಿ ಹೇಮಾವತಿ ವಿ ಹೆಗ್ಗಡೆಯವರೊಂದಿಗೆ ಆಗಮಿಸಿ ಮತದಾನ ನೆರವೇರಿಸಿದರು.
ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ಗಾಂಧಿನಗರದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೂತ್ ನಂಬರ್ 86 ರಲ್ಲಿ ಕುಟುಂಬ ಸಮೇತ ಮತ ಚಲಾಯಿಸಿದರು.
ಉಳ್ಳಾಲ ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ಹಾಜಿ ಬಿ.ಜಿ ಹನೀಫ್ ಹಾಜಿ ಉಳ್ಳಾಲ ಭಾರತ್ ಶಾಲೆಯಲ್ಲಿ ಮತಚಲಾಯಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಕಿನ್ನಿಗೋಳಿಯ ಸೇಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ಬೂತ್ ಸಂಖ್ಯೆ 98 ರಲ್ಲಿ ಮತದಾನಗೈದರು.
ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ವೈ. ಅವರು ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜು ಕದ್ರಿ ಬಿ 22ನೇ ವಾರ್ಡಿನ 141ನೇ ಬೂತ್ ನಲ್ಲಿ ಕಾರ್ಯಕರ್ತರೊಂದಿಗೆ ತೆರಳಿ ಮತದಾನ ಮಾಡಿದರು.
ಪುತ್ತೂರು ತಾಲೂಕಿನ ಉಪ್ಪಳಿಗೆ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾವಣೆಗಾಗಿ ಸರತಿ ಸಾಲಿನಲ್ಲಿ ನಿಂತ ಮತದಾರರು.