ಮಂಗಳೂರು| CM ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆಗೆ ಯತ್ನ; ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

Update: 2024-02-17 13:01 GMT

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದು, ಈ ಸಂದರ್ಭ ಬೊಂದೆಲ್ ಬಳಿ ರಸ್ತೆ ತಡೆಗೆ ಯತ್ನಿಸಿದ ಬಜೆಪಿ ಯುವ ಮೋರ್ಚಾದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಸಕ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ವಿರುದ್ಧ ವೆಲೆನ್ಸಿಯಾದ ಶಾಲೆಯ ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ರಸ್ತೆ ತಡೆ ನಡೆಸಲು ಯತ್ನಿಸಿದಾಗ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Full View



 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News