ಮಂಗಳೂರು ಫುಟ್ಬಾಲ್ ಗ್ರೌಂಡ್ | 2 ಕೋಟಿ ರೂ. ವೆಚ್ಚದಲ್ಲಿ ಆಸ್ಟ್ರೋ ಟರ್ಫ್ ಕಾಮಗಾರಿಗೆ ಶೀಘ್ರ ಚಾಲನೆ: ದಿನೇಶ್ ಗುಂಡೂ ರಾವ್
ಮಂಗಳೂರು, ಆ.15: ನಗರದ ನೆಹರೂ ಮೈದಾನಕ್ಕೆ ತಾಗಿಗೊಂಡಿರುವ ಫುಟ್ಬಾಲ್ ಮೈದಾನದಲ್ಲಿ ಫುಟ್ಬಾಲ್ ಆಟಗಾರರಿಗೆ ಅನುಕೂಲವಾಗುವಂತೆ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಯೋಜನೆಯಡಿ 2 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಟ್ರೋ ಟರ್ಫ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದ್ದು, ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನಿಡಲಾಗಿವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ 26ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್‌ನ ಸಮಾರೋಪ ಸಮಾರಂಭದಲ್ಲಿ ಗುರುವಾರ ಭಾಗವಹಿಸಿ ಅವರು ಮಾತನಾಡಿದರು.
ಆಸ್ಟ್ರೋ ಟರ್ಫ್ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಿ ಸ್ಥಳೀಯ ಕ್ರೀಡಾ ಪ್ರತಿಭೆಗಳ ಬಳಕೆಗೆ ಈ ಗ್ರೌಂಡ್ ಬೇಗನೆ ಲಭ್ಯವಾಗುಂತೆ ಮಾಡಲು ಪ್ರಯತ್ನಿಸಲಾಗುವುದು ಎಂದರು.
ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ವಿಜೇತರಾದವರನ್ನು ಸಚಿವ ದಿನೇಶ್ ಗುಂಡೂರಾವ್ ಅಭಿನಂದಿಸಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಅಲೈಡ್ ಆ್ಯಂಡ್ ಹೆಲ್ತ್ ಕೇರ್ ರಾಷ್ಟ್ರೀಯ ಆಯೋಗದ ಕರ್ನಾಟಕ ರಾಜ್ಯ ಅಧ್ಯಕ್ಷ ಡಾ.ಯು.ಟಿ.ಇಫ್ತಿಕರ್ ಅಲಿ ಶುಭ ಹಾರೈಸಿದರು.ಉದ್ಯಮಿಗಳಾದ ಅಬ್ದುಲ್ಲ ಮೋನು ಕತಾರ್, ಮೋಹನ್ ಬೆಂಗ್ರೆ, ಕಣಚೂರು ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಅಧ್ಯಕ್ಷ ಡಾ. ಯು.ಕೆ. ಮೋನು ಕಂಚೂರು , ಮನಪಾ ಸದಸ್ಯ ಎಸಿ ವಿನಯ್‌ರಾಜ್ ,ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಡಿ.ಎಂ. ಅಸ್ಲಂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.