ಮಂಗಳೂರು: ಕರ್ನಾಟಕ ಒನ್ ಕೇಂದ್ರಕ್ಕೆ ಸ್ಪೀಕರ್ ಯು.ಟಿ. ಖಾದರ್ ಚಾಲನೆ

Update: 2024-03-05 06:53 GMT

ಮಂಗಳೂರು: ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ನೂತನವಾಗಿ ಸ್ಥಾಪಿಸಲಾದ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರವನ್ನು ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಶನಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ಸರಕಾರದ ಯೋಜನೆಗಳು ಅತ್ಯಂತ ಸರಳ ಮತ್ತು ಪ್ರಾಮಾಣಿಕವಾಗಿ ದೊರಕಲು ಕರ್ನಾಟಕ ಒನ್ ಕೇಂದ್ರಗಳು ಬಹಳ ಪ್ರಯೋಜನಕಾರಿಯಾಗಿದೆ. ರಾಜ್ಯ ಸರಕಾರದ ವಿವಿಧ ಗ್ಯಾರಂಟಿ ಯೋಜನೆಗಳು ಸಾರ್ವಜನಿಕರಿಗೆ ಯಾವುದೇ ಮಧ್ಯವರ್ತಿಗಳ ಅಗತ್ಯವಿಲ್ಲದೆ ನೇರವಾಗಿ ದೊರಕುತ್ತಿದ್ದು, ಈ ನಿಟ್ಟಿನಲ್ಲಿ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಿಂದ ನಾಗರಿಕರಿಗೆ ಹೆಚ್ಚು ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿಯೂ ಇಂತಹ ಕೇಂದ್ರ ಸ್ಥಾಪಿಸಲು ಒತ್ತು ನೀಡಲಾಗುವುದು ಎಂದು ಹೇಳಿದರು.

          ಮುಖ್ಯ ಅತಿಥಿಗಳಾಗಿ ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮದ‌ ಅಧ್ಯಕ್ಷೆ ಮಾಲಾ‌ ನಾರಾಯಣ ರಾವ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅಬ್ದುಲ್ ಲತೀಫ್, ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಎ.‌ಮುಹಮ್ಮದ್ ಹನೀಫ್, ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್, ಜಿಲ್ಲಾ ವಾರ್ತಾಧಿಕಾರಿ ಬಿ‌.ಎ. ಖಾದರ್ ಶಾ, ಉದ್ಯಮಿ ಮುಹಮ್ಮದ್ ಮೂಡಿಗೆರೆ ಮತ್ತಿತರರು ಭಾಗವಹಿಸಿದ್ದರು.

ನ್ಯಾಯವಾದಿ ಮುಖ್ತಾರ್ ಅಹಮದ್ ಸ್ವಾಗತಿಸಿದರು.ಸೈದುದ್ದೀನ್ ನಿರೂಪಿಸಿದರು.

ಕರ್ನಾಟಕ ಒನ್ ಯೋಜನೆಯ ಮುಖ್ಯ ಉದ್ದೇಶ ಎಲ್ಲಾ ನಾಗರಿಕ ಸೇವೆಗಳನ್ನು ಒಂದೇ ಸೂರಿನಡಿ ನೀಡುವುದಾಗಿದೆ. ಸರ್ಕಾರಿ ಮತ್ತು ಖಾಸಗಿ ಸೇವೆಗಳನ್ನು ಕರ್ನಾಟಕ ಒನ್ ಕೇಂದ್ರದಿಂದ ಪಡೆಯಬಹುದು. ಮಂಗಳೂರು ಮಹಾ‌ನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಕಟ್ಟಡಗಳ ತೆರಿಗೆ/ ಟ್ಯಾಕ್ಸ್, ನೀರಿನ ಬಿಲ್, ವಿದ್ಯುತ್ ಬಿಲ್, ಹೆಚ್ಚುವರಿ ಭದ್ರತಾ ಠೇವಣಿ ಪಾವತಿ, ಪೊಲೀಸ್ ವೆರಿಫಿಕೇಷನ್, ವಾಹನಗಳ ವಿಚಾರಣಾ ವರದಿಗಾಗಿ ಶುಲ್ಕ ಪಾವತಿ, ಪಡಿತರ ಚೀಟಿಗಾಗಿ ಅರ್ಜಿ, ಆಧಾರ್ ನೋಂದಣಿ, ತಿದ್ದುಪಡಿ, ಇ-ಸ್ಟಾಂಪ್ ಪೇಪರ್/ E Stamp paper, ಇ-ಆಧಾರ್ ಮುದ್ರಿತ ಒಳಗೊಂಡತೆ 50ಕ್ಕೂ ಹೆಚ್ಚು ಸೌಭ್ಯ ಈ ಕೇಂದ್ರದಲ್ಲಿ ದೊರೆಯುತ್ತವೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News