ಮಂಗಳೂರು: ರಸ್ತೆ ಅಪಘಾತ; ಓರ್ವ ಮೃತ್ಯು, ಮೂವರಿಗೆ ಗಾಯ

Update: 2023-08-20 16:57 GMT

ಮಂಗಳೂರು: ನಗರದ ಪಂಪ್‌ವೆಲ್ ಬಳಿ ಎರಡು ಬೈಕ್‌ಗಳ ಮಧ್ಯೆ ರವಿವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂರು ಮಂದಿ ಗಾಯಗೊಂಡ ಘಟನೆ ನಡೆದಿರುವುದಾಗಿ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತಪಟ್ಟವರನ್ನು ಮೆಫಿನ್ ಥಾಮಸ್ (25) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಬೈಕ್‌ಗಳ ಮಧ್ಯೆ ಢಿಕ್ಕಿ ಸಂಭವಿಸಿದ್ದು, ಅದೇ ದಾರಿಯಾಗಿ ಸಾಗುತ್ತಿದ್ದ ಲಾರಿಗೂ ಬೈಕ್‌ಗಳು ಢಿಕ್ಕಿ ಹೊಡೆದಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News