ಮಂಗಳೂರು: ಸೈಯದ್ ಅಹ್ಮದ್ ಭಾಷಾ ತಂಙಳ್ ನಿಧನ

Update: 2023-11-13 15:23 GMT

ಮಂಗಳೂರು: ನಗರದ ಬಂದರ್ ಕಸೈಗಲ್ಲಿ ನಿವಾಸಿ ಹಾಜಿ ಸೈಯದ್ ಅಹ್ಮದ್ ಬಾಷಾ ತಂಙಳ್ (60) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಸಂಜೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪತ್ನಿ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ.

ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮ್ಮಾ ಮಸೀದಿಯ ಕೋಶಾಧಿಕಾರಿ ಮತ್ತು ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಹಾಗೂ ಎಸ್‌ವೈಎಸ್ ದ.ಕ.ಜಿಲ್ಲಾ ಉಪಾಧ್ಯಕ್ಷ, ಮಂಗಳೂರಿನ ಅಲ್‌ ಹಝರಿಯಾ ಮದ್ರಸದ ಕಾರ್ಯಕಾರಿ ಸಮಿತಿಯ ಸದಸ್ಯ, ಕಾಶಿಪಟ್ಣದ ದಾರುನ್ನೂರು ಎಜುಕೇಶನ್ ಸೆಂಟರ್‌ನ ಮಾಜಿ ಕೋಶಾಧಿಕಾರಿಯಾಗಿದ್ದ ಸೈಯದ್ ಅಹ್ಮದ್ ಬಾಷಾ ತಂಙಳ್ ಇನ್ನೂ ಹಲವು ಸಾಮಾಜಿಕ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ದ.ಕ.ಜಿಲ್ಲಾಧ್ಯಕ್ಷರಾಗಿದ್ದ ಅವರು ಪ್ರಸ್ತುತ ಮುಸ್ಲಿಂ ಲೀಗ್ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

*ಮಂಗಳವಾರ ಬೆಳಗ್ಗೆ 10ಕ್ಕೆ ನಗರದ ಬಂದರ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಆವರಣದಲ್ಲಿ ದಫನ ಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ: ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್, ಉಪಾಧ್ಯಕ್ಷರಾದ ಹಾಜಿ ಸಿ. ಮಹಮೂದ್, ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಝ್ ಅಲಿ, ಮಾಜಿ ಮೇಯರ್ ಕೆ.ಅಶ್ರಫ್, ಹಾಜಿ ಇಮ್ತಿಯಾಝ್ ಅಹ್ಮದ್ ಕಾರ್ಕಳ, ಹಾಜಿ ಬಾಷಾ ಸಾಹೇಬ್ ಕುಂದಾಪುರ, ಎಸ್.ಎಂ.ರಶೀದ್ ಹಾಜಿ ಕೆ.ಪಿ.ಅಹ್ಮದ್ ಪುತ್ತೂರು, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಬಂದರ್, ಕೋಶಾಧಿಕಾರಿ ಹಾಜಿ ಮೂಸಾ ಮೊಯಿದಿನ್, ಕಾರ್ಯದರ್ಶಿಗಳಾದ ಹಾಜಿ ಅಹ್ಮದ್ ಬಾವ ಪಡೀಲ್, ಸಿ.ಎಂ. ಹನೀಫ್, ಅಹ್ಮದ್ ಬಾವ ಬಜಾಲ್, ಹಾಜಿ ರಿಯಾಝುದ್ದೀನ್, ಡಿ.ಎಂ. ಅಸ್ಲಂ, ಎಂ.ಎ. ಅಶ್ರಫ್, ಹಾಜಿ ಮೊಯಿದಿನ್ ಮೋನು, ಹಾಜಿ ಪಿ.ಪಿ. ಮಜೀದ್, ಯು.ಬಿ. ಸಲೀಂ, ಡಾ.ಆರೀಫ್ ಮಸೂದ್, ಹಾಜಿ ಬಿ.ಎಸ್. ಹುಸೈನ್ ಜೋಕಟ್ಟೆ, ಅಬೀದ್ ಜಲಿಹಾಲ್, ಹಾಜಿ ಮಕ್ಬೂಲ್ ಅಹ್ಮದ್, ಹಾಜಿ ಎಸ್.ಎ ಖಲೀಲ್ ಅಹ್ಮದ್, ಮುಸ್ಲಿಂ ಜಸ್ಟೀಸ್ ಫೋರಂನ ಉಪಾಧ್ಯಕ್ಷ ಅಲಿ ಹಸನ್, ಮುಸ್ಲಿಂ ಲೀಗ್ ಜಿಲ್ಲಾಧ್ಯಕ್ಷ ಸಿ. ಅಬ್ದುರ‌್ರಹ್ಮಾನ್, ಜಿಲ್ಲಾ ಕಾರ್ಯದರ್ಶಿ ರಿಯಾಝ್ ಹರೇಕಳ, ಮಂಗಳೂರು ತಾಪಂ ಮಾಜಿ ಸದಸ್ಯ ಎನ್.ಇ. ಮುಹಮ್ಮದ್ ಮಲ್ಲೂರು ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News