ಮಂಗಳೂರು: ದ್ವಿಚಕ್ರ ವಾಹನ ಸ್ಕಿಡ್; ಸವಾರ ಮೃತ್ಯು

Update: 2024-01-24 09:22 GMT

ಮಂಗಳೂರು: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನೇತ್ರಾವತಿ ಸೇತುವೆ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಲ್ಲಾಪು ನಿವಾಸಿ, ಮೂಲತಃ ಬಾಗಲಕೋಟೆ ಜಿಲ್ಲೆಯವನಾದ ಸುರೇಶ್ (30) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಿಂದ ಕಲ್ಲಾಪು ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣವೇ ಸಾರ್ವಜನಿಕರು ಮೃತದೇಹವನ್ನು ಆಂಬುಲೆನ್ಸ್ ಮೂಲಕ ನಗರದ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News