ಮಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ದಿನಾಂಕ ಪ್ರಕಟ

Update: 2023-08-30 08:33 GMT

ಮಂಗಳೂರು, ಆ.30: ಮಂಗಳೂರು  ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯ ದಿನಾಂಕ ಪ್ರಕಟಗೊಂಡಿದೆ. 

ಸೆಪ್ಟೆಂಬರ್‌ 8 ರಂದು (ಶುಕ್ರವಾರ) ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲಾಗುವುದು ಎಂದು ಪಾಲಿಕೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News