ಮಾಣಿ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಕಾರು ಢಿಕ್ಕಿ

Update: 2024-05-30 04:30 GMT

ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ  ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಬುಧವಾರ ಬೆಳಿಗ್ಗೆ ಕಾರೊಂದು ಢಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆಯಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ.

ಕಾರು ಗುದ್ದಿದ ಕಾರಣ ತಡೆಬೇಲಿ ಮತ್ತು ಕಾರು ನಜ್ಜುಗುಜ್ಜಾಗಿದೆ. ಈ ತಡೆಬೇಲಿ ಪರ್ಮನೆಂಟ್ ಆಗಿದ್ದು ಇದರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಇದರ ನಿರ್ಮಾಣ ಕಾರ್ಯ ನೋಡಿ, ಇದು ಉಳಿಯಬಹುದಾ? ಇದನ್ನು ವೇಗವಾಗಿ ಬರುವ ಗಾಡಿಗಳು ಸೀಳಿಕೊಂಡು ಹೋಗಬಹುದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು ಎನ್ನಲಾಗಿದೆ.

ಅದರಂತೆ ಇಂದು ಬೆಳಗ್ಗಿನ ಜಾವ ಘಟನೆ ನಡೆದಿದ್ದು ಉತ್ತಮ ಗುಣಮಟ್ಟದ ಕಾಂಕ್ರೀಟ್ ಬೇಲಿ ನಿರ್ಮಿಸಬಹುದಿತ್ತು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.  

ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News