ಮಾಣಿ: ಸೋಶಿಯಲ್ ಇಖ್ವಾ ಫೆಡರೇಶನ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Update: 2023-08-15 08:52 GMT

ಬಂಟ್ವಾಳ : ಮಾಣಿ ಸೋಶಿಯಲ್ ಇಖ್ವಾ ಫೆಡರೇಶನ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಮಾಣಿಯ ಬಿ.ಎಮ್.ಆರ್ ಪೆಟ್ರೋಲ್ ಬಂಕ್ ಬಳಿ ನಡೆಯಿತು.

ಸೋಶಿಯಲ್ ಇಖ್ವಾ ಫೆಡರೇಶನ್ ಅಧ್ಯಕ್ಷ ಅಬ್ದುಲ್ ರಹೀಂ ಸುಲ್ತಾನ್ ಧ್ವಜಾರೋಹಣಗೈದರು.

ಸೂರಿಕುಮೇರ್ ಜುಮ್ಮಾ ಮಸೀದಿ ಖತೀಬರಾದ ಮುಹಮ್ಮದ್ ಹನೀಫ್ ಸಹದಿ ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಮರ ಪಾತ್ರದ ಬಗ್ಗೆ ವಿವರಿಸಿದರು.

ಮುಸ್ಲಿಂ ಸೆಂಟ್ರಲ್ ಸಮಿತಿ ಸದಸ್ಯ ಹನೀಫ್ ಖಾನ್ ಕೊಡಾಜೆ ಮಾತನಾಡಿ ಈ ದೇಶದಲ್ಲಿ ಅಹಿಂದರಿಗೆ ಮತ್ತು ಸ್ತ್ರೀಯರಿಗೆ ಸ್ವಾತಂತ್ರ್ಯ ಎಂಬುದು ಇನ್ನೂ ಕನಸಿನ ಮಾತಾಡಿದ್ದು, ಅವರ ವಿಮೋಚನೆಗಾಗಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

 ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಜಿ ಇಬ್ರಾಹಿಂ ಕೆ.ಮಾಣಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ,

ಮಾಣಿ ಗ್ರಾ.ಪಂ.ಸದಸ್ಯ ಮೆಲ್ವಿನ್ ಮಾರ್ಟಿಸ್, ಸೂರಿಕುಮೇರ್ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಹಮೀದ್, ಮಾಜಿ ಅಧ್ಯಕ್ಷ ಮೂಸಾ ಕರೀಂ ಮಾಣಿ ಅತಿಥಿಗಳಾಗಿ ಭಾಗವಹಿಸಿದ್ದರು.

 ಸೋಶಿಯಲ್ ಇಖ್ವಾ ಫೆಡರೇಶನ್ ಪ್ರದಾನ ಕಾರ್ಯದರ್ಶಿ ಜೈನುಲ್ ಅಕ್ಬರ್ ಕಡೇಶ್ವಾಲ್ಯ ಸ್ವಾಗತಿಸಿ, ಶೈಕ್ಷಣಿಕ ಕಾರ್ಯದರ್ಶಿ ಲತೀಫ್ ಕೊಡಾಜೆ ವಂದಿಸಿದರು. ಜೊತೆ ಕಾರ್ಯದರ್ಶಿ ರಶೀದ್ ನೀರಪಾದೆ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News