ಮುಲ್ಕಿ: ತಾಯಿಯ ಆತ್ಮಹತ್ಯೆಗೆ ಪ್ರಚೋದನೆ; ಮೂವರು ಪುತ್ರರ ಬಂಧನ

Update: 2023-09-01 06:55 GMT

ಮುಲ್ಕಿ: ಮಹಿಳೆಯೊಬ್ಬರು ತನ್ನ ಮೂವರು ಗಂಡು ಮಕ್ಕಳು ವಿಪರೀತ ಮದ್ಯ ಸೇವಿಸಿ ಮನೆಗೆ ಬಂದು ಜಗಳ ಮಾಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮುಲ್ಕಿ ಸಮೀಪದ ಕೆ ಎಸ್ ರಾವ್ ನಗರದ ಲಿಂಗಪ್ಪಯ್ಯ ಕಾಡು ಪ್ರದೇಶದ ಕೊರಂಟಬೆಟ್ಟು ಕಾಲೋನಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.

ಮೃತ ಮಹಿಳೆಯನ್ನು ಸುಮಿತ್ರ (44) ಎಂದು ಗುರುತಿಸಲಾಗಿದೆ.

ಆರೋಪಿಗಳಾದ ಮಂಜುನಾಥ (25), ಪ್ರಹ್ಲಾದ ಯಾನೆ ಪ್ರಭು (19),ಸಂಜೀವ(22) ಗುರುವಾರ ರಾತ್ರಿ 11:30 ಗಂಟೆಗೆ ಮದ್ಯದ ನಶೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ಸಂದರ್ಭ ತಾಯಿ ಸುಮಿತ್ರ ಮನನೊಂದು ಕೋಣೆಯ ಪಕ್ಕಾಸಿನಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪಣಂಬೂರು ಎಸಿಪಿ, ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕೂಡಲೇ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News