ಮುಮ್ತಾಝ್ ಅಲಿ ಪ್ರಕರಣ: ಮತ್ತೆ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

Update: 2024-10-10 18:43 GMT

ಕಾವೂರು: ಉದ್ಯಮಿ ಮುಮ್ತಾಝ್‌ ಅಲಿ ಪ್ರಕಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಗುರುವಾರ ನ್ಯಾಯಾಲಯಕ್ಕೆ‌ ಹಾಜರುಪಡಿಸಿದ್ದಾರೆ‌.

ಪ್ರಕರಣದ ಸೂತ್ರದಾರ ಹಾಗೂ ಎ2 ಆರೋಪಿ ಕೃಷ್ಣಾಪುರ ನಿವಾಸಿ ಅಬ್ದುಲ್ ಸತ್ತಾರ್, ಎ3 ಆರೋಪಿ ಮುಹಮ್ಮದ್‌ ಮುಸ್ತಫಾ, 4ನೇ ಆರೋಪಿ ಬಂಟ್ವಾಳ ತಾಲೂಕಿನ ನಂದಾವರ ನಿವಾಸಿ ಶಾಫಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಕಾವೂರು ಪೊಲೀಸರು, ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ‌ ಮೂವರು ಆರೋಪಿಗಳನ್ನು ಅ.9ರಂದು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ ಕಾವೂರು ಪೊಲೀಸರಿಗೆ ಹಸ್ತಾಂತರಿಸಿದ್ದರು.

ಇದೇ ಪ್ರಕರಣದಲ್ಲಿ ಅ.8ರಂದು ಎ1 ಆರೋಪಿ ರೆಹಮತ್‌ ಮತ್ತು 5ನೇ ಆರೋಪಿ ಆಕೆಯ ಪತಿ ಶುಐಬ್‌ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ ಕಾವೂರು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದರು.

ಅ.6ರಂದು ಮುಮ್ತಾಝ್‌ ಅಲಿ ಅವರ ಸಹೋದರ ಹೈದರಾಲಿ ಅವರು ಪ್ರಮುಖ ಆರೋಪಿ ರೆಹಮತ್‌ ಸೇರಿ 6ಮಂದಿಯ ವಿರುದ್ಧ ಸಹೋದರನಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಹಾಗೂ ಪ್ರಚೋದನೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿರುತ್ತಾರೆ ಎಂದು ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್‌ 308(2), 308(5),352, 351(2), 190, 108 ಬಿ.ಎನ್.ಎಸ್ 2023 ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News