ಕೊಂಕಣಿ ಲೇಖಕರ ಸಂಘದ 'ಕೊಂಕಣಿ ಸಾಹಿತ್ಯ ಪ್ರಶಸ್ತಿ'ಗೆ ಜೆರಿ ನಿಡ್ಡೋಡಿ ಆಯ್ಕೆ

Update: 2024-02-02 11:01 GMT

ಮಂಗಳೂರು, ಫೆ.2: ಕೊಂಕಣಿ ಲೇಖಕ್ ಸಂಘದ ವತಿಯಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ ನೀಡುತ್ತಿರುವ 'ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿ''ಗೆ ಖ್ಯಾತ ಕೊಂಕಣಿ ಸಾಹಿತಿ ಡಾ.ಜೆರಾಲ್ಡ್ ಪಿಂಟೊ (ಜೆರಿ, ನಿಡ್ಡೋಡಿ) ಆಯ್ಕೆಯಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಈ ಬಗ್ಗೆ ಮಾಹಿತಿ ನೀಡಿದ ಸಂಘದ ಸಂಚಾಲಕ ರಿಚರ್ಡ್ ಮೊರಾಸ್, ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ ಎಂದರು.

ಪ್ರಶಸ್ತಿ ಪ್ರದಾನ ಸಮಾರಂಭ ಫೆ.17ರಂದು ಸಂಜೆ 6:30ಕ್ಕೆ ನಗರದ ಬಜ್ಜೋಡಿಯ ಸಂದೇಶ ಪ್ರತಿಷ್ಠಾನದಲ್ಲಿ ನಡೆಯಲಿದೆ ಎಂದವರು ತಿಳಿಸಿದರು.

ಜೆರಿ ನಿಡ್ಡೋಡಿಯವರ ಆರು ಕಾದಂಬರಿಗಳು, 75 ಕತೆಗಳು ಹಾಗೂ 900ಕ್ಕೂ ಮೇಲ್ಪಟ್ಟು ಲೇಖನಗಳು ಕೊಂಕಣಿ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ನಾನಾ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದು, ಅನೇಕ ಕೊಂಕಣಿ ಪತ್ರಿಕೆಗಳ ಸಂಪಾದಕೀಯ ತಂಡದಲ್ಲಿ ಸದಸ್ಯರಾಗಿ ಅವರು ಕಾರ್ಯನಿರ್ವಹಿಸಿದ್ದಾರೆ. ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಈಗ ನಿವೃತ್ತರಾಗಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ಡೋಲ್ಫಿ ಎಫ್. ಲೋಬೊ, ಹೆನ್ರಿ ಮಸ್ಕರೇನ್ಹಸ್ ಹಾಗೂ ಜೆ. ಎಫ್. ಡಿಸೋಜ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News