ತಲಪಾಡಿ | ಬೈಕ್ ಢಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

Update: 2024-03-18 09:25 GMT

ಉಳ್ಳಾಲ, ಮಾ.18: ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಲಪಾಡಿಯಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ.

ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49) ಮೃತಪಟ್ಟವರು.

ರಾಜೇಶ್ ರಿಗೆ ತಲಪಾಡಿ ಹಳೆ ಬಸ್ಸು ತಂಗುದಾಣದ ಬಳಿ ಬೇಕರಿ ಇದ್ದು, ಎದುರಿನ ಹೆದ್ದಾರಿ ಬದಿಯಲ್ಲೇ ಮನೆ ಹೊಂದಿದ್ದಾರೆ. ರವಿವಾರ ಮಧ್ಯಾಹ್ನ ಮನೆಯಿಂದ ಬೇಕರಿಗೆ ತೆರಳಲು ಹೆದ್ದಾರಿ ದಾಟಲು ಮುಂದಾಗಿದ್ದ ವೇಳೆ ರಸ್ತೆಯ ವಿರುದ್ಧ ಧಿಕ್ಕಿನಲ್ಲಿ ಬಂದ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರಾಜೇಶ್ ರ ತಲೆಗೆ ಗಂಭೀರ ಗಾಯಗಳಾಗಿತ್ತು. ತಕ್ಷಣ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಅಪಘಾತಕ್ಕೆ ಕಾರಣವಾದ ಬೈಕ್ ಸವಾರ ಮುಹಮ್ಮದ್ ಸುಹೈಲ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News