ಮತದಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢ: ಎಸ್.ಪ್ರದೀಪ ಕುಮಾರ ಕಲ್ಕೂರ

Update: 2024-04-24 18:48 GMT

ಮಂಗಳೂರು: ಕಲ್ಕೂರ ಪ್ರತಿಷ್ಠಾನದ ವತಿಯಿಂದ ನಗರದ ಪಿವಿಎಸ್ ಸರ್ಕಲ್ ಬಳಿ ಬುಧವಾರ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ವಿವಿಧ ಕ್ಷೇತ್ರದ ಗಣ್ಯರು ಮತದಾನದ ಮಹತ್ವ ಸಾರುವ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಮಾತನಾಡಿ ‘ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ನಮ್ಮೆಲ್ಲರ ಮೂಲಭೂತ ಹಕ್ಕು. ಪ್ರತಿಯೊಬ್ಬರು ಮತ ಚಲಾಯಿಸುವುದರಿಂದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢವಾಗುತ್ತದೆ. ರಾಷ್ಟ್ರ ನಿರ್ಮಾಣ, ನಾಡು-ನುಡಿಯ ಬಗ್ಗೆ ಜಾಗೃತಿ ಹಾಗೂ ದೇಶಾಭಿಮಾನದಿಂದ ನಾವೆಲ್ಲರೂ ಸಂವಿಧಾನ ನಮಗೆ ನೀಡಿ ರುವ ಹಕ್ಕನ್ನು ತಪ್ಪದೇ ಚಲಾಯಿಸಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಡಾ.ಹರಿಕೃಷ್ಣ ಪುನರೂರು, ಸಾಹಿತಿ ಭಾಸ್ಕರ ರೈ ಕುಕ್ಕುವಳ್ಳಿ, ಶಾರದಾ ವಿದ್ಯಾಸಂಸ್ಥೆಯ ಪ್ರಾಂಶುಪಾಲ ದಯಾನಂದ ಕಟೀಲು, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಸುಧಾಕರ ರಾವ್ ಪೇಜಾವರ, ಪ್ರಭಾಕರ ರಾವ್ ಪೇಜಾವರ, ಪೂರ್ಣಿಮಾ ಆರ್, ಆನಂದರಾಮ ಐತಾಳ, ರವೀಂದ್ರ ರಾವ್, ಶೋಭಾ ರಾವ್, ರಘುರಾಮ್, ತಮ್ಮ ಲಕ್ಷ್ಮಣ , ಶಿವಪ್ರಸಾದ್ ಪ್ರಭು , ಹಂಝ ಮೇರೆಮಜಲು ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News