ವಿಧಾನ ಪರಿಷತ್‌ ಉಪಚುನಾವಣೆ: ನಾಲ್ವರು ಅಂತಿಮ ಕಣದಲ್ಲಿ

Update: 2024-10-07 14:26 GMT

ಮಂಗಳೂರು: ವಿಧಾನ ಪರಿಷತ್‌ ದಕ್ಷಿಣಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ನಾಲ್ಕು ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಮುಹಮ್ಮದ್‌ ರಿಯಾಝ್ (ಪಕ್ಷೇತರ) ಅವರು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಅಂತಿಮವಾಗಿ ಕಿಶೋರ್ .ಬಿ.ಆರ್ (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), ಅನ್ವರ್ ಸಾದತ್‌ಎಸ್ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿಆಫ್ ಇಂಡಿಯಾ) ಮತ್ತು ದಿನಕರ ಉಳ್ಳಾಲ್ (ಪಕ್ಷೇತರ) ಅವರು ಕಣದಲ್ಲಿದ್ದಾರೆ. ಚುನಾವಣೆಯು ಅಕ್ಟೋಬರ್ 21 ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Full View

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News