ಸಮಾಜದಲ್ಲಿ ನೈತಿಕ ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ಮುಹಮ್ಮದ್ ಕುಂಞಿ

Update: 2024-10-14 14:43 GMT

ಮಂಗಳೂರು, ಅ.14: ಒಬ್ಬ ವ್ಯಕ್ತಿಯು ಅನೈತಿಕವಾದಾಗ, ಅವನು ರಾಕ್ಷಸನಾಗಿ ಬದಲಾಗುತ್ತಾನೆ. ಇದರಿಂದಾಗಿಯೇ ಸಮಾಜದಲ್ಲಿ ಅತ್ಯಾಚಾರ, ಕೊಲೆ, ದರೋಡೆಯಂತಹ ಅಪರಾಧಗಳು ಹೆಚ್ಚುತ್ತಿವೆ. ಅನೈತಿಕತೆ ಹೆಚ್ಚುತ್ತಿರುವ ಸಮಾಜ ದಲ್ಲಿ ಸತ್ಯ, ನೈತಿಕತೆ, ಸಹಿಷ್ಣುತೆ, ಪ್ರೀತಿಯಂತಹ ಮಾನವೀಯ ಮೌಲ್ಯಗಳನ್ನು ಬಲಪಡಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಹೇಳಿದರು.

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಱಬದಲಾವಣೆಯ ಕಲ್ಪನೆಗಳ ಪುನರಾವಲೋಕನೞ ಎಂಬ ವಿಷಯದಡಿ ಶನಿವಾರ ತೊಕ್ಕೊಟ್ಟು ಸಮೀಪದ ಕಲ್ಲಾಪಿನಲ್ಲಿ ಆಯೋಜಿಸಲಾದ ಸಾರ್ವಜನಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಎಸ್‌ಐಒ ರಾಷ್ಟ್ರೀಯ ಕಾರ್ಯದರ್ಶಿ ಅಡ್ವಕೇಟ್ ಅನೀಸ್ ರಹ್ಮಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಸ್‌ಐಒ ಕರ್ನಾಟಕ ರಾಜ್ಯಾಧ್ಯಕ್ಷ ಝೀಶಾನ್ ಅಖಿಲ್ ಸಿದ್ದಿಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ನಾಗರಿಕರು ಜಾಗೃತರಾಗಿರಬೇಕು. ಅವರಿಲ್ಲದಿದ್ದರೆ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಜಮಾಅತೆ ಇಸ್ಲಾಮಿ ಹಿಂದ್ ಕೇರಳದ ಘಟಕದ ಮುಖಂಡರಾದ ವಿ.ಟಿ. ಅಬ್ದುಲ್ಲ ಕೋಯ ತಂಙಳ್, ಸಲೀಂ ಮಂಬಾಡ್, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ದ.ಕ. ಜಿಲ್ಲಾ ಸಹಕಾರ್ಯದರ್ಶಿ ಝಿನೇರಾ ಹುಸೇನ್ ಭಾಗವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ದ.ಕ. ಜಿಲ್ಲಾ ಸಂಯೋಜಕ ಅಬ್ದುಲ್ ಗಫೂರ್ ಕುಳಾಯಿ, ಮೌಲಾನಾ ಯಹ್ಯಾ ತಂಳ್ ಮದನಿ, ಅಬ್ದುಲ್ ಕರೀಂ ಉಳ್ಳಾಲ, ಎಸ್‌ಐಒ ರಾಜ್ಯ ಪದಾಧಿಕಾರಿಗಳಾದ ಮುಝಾಹಿರ್ ಕುದ್ರೋಳಿ, ಅಫ್ವಾನ್ ಹೂಡೆ, ಸಮೀರ್ ಪಾಷಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News