ಸಿಎಂ ಸಿದ್ದರಾಮಯ್ಯ, ಡಿಕೆಶಿ, ಪ್ರಿಯಾಂಕ್ ಖರ್ಗೆ ವಿರುದ್ಧ ನಿಂದನೆ: ಕಾಂಗ್ರೆಸ್ ಮುಖಂಡರಿಂದ ದೂರು ದಾಖಲು

Update: 2024-11-09 16:43 GMT

 (ಆರೋಪಿ ಮೋಹಿತ್ ನರಸಿಂಹಮೂರ್ತಿ) ಕಾಂಗ್ರೆಸ್‌ ಮುಖಂಡರಿಂದ ದೂರು ದಾಖಲು

ಮಂಗಳೂರು: ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನಕಾರಿ ಮತ್ತು ಪ್ರಚೋದನಕಾರಿ ವೀಡಿಯೊವನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ವ್ಯಕ್ತಿಯ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನಿರ್ದೇಶನ ಮೇರೆಗೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 5 ಕಡೆಗಳಲ್ಲಿ ದೂರು ದಾಖಲಿಸಿದೆ.

ಮೋಹಿತ್ ನರಸಿಂಹಮೂರ್ತಿ ಎಂಬಾತ ಮುಖ್ಯಮಂತ್ರಿ ಸಿದ್ದರಾಮಯ್ಯ,  ಡಿ.ಕೆ. ಶಿವಕುಮಾರ್ ಹಾಗೂ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನಕಾರಿ ಮತ್ತು ಪ್ರಚೋದನಕಾರಿ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸಿರುತ್ತಾನೆ. ಆತನ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನಿರ್ದೇಶನ ಮೇರೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್, ಪಣಂಬೂರು, ಕಾವೂರು, ವಾಮಂಜೂರು, ಬಜ್ಪೆ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದರು.

ದೂರು ನೀಡುವ ಸಂದರ್ಭ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಕೆಪಿಸಿಸಿ ಸದಸ್ಯ ಆರ್.ಕೆ. ಪೃಥ್ವಿರಾಜ್, ಮುಖಂಡರಾದ ಪದ್ಮನಾಭ ಕೋಟ್ಯಾನ್, ಶ್ರೀನಿವಾಸ್ ಸಾಲಿಯಾನ್ ಬೋಂದೆಲ್, ಕಿಶೋರ್ ಶೆಟ್ಟಿ ಹಾಗೂ ಇನ್ನಿತರರು ಇದ್ದರು.



Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News