ಒಡ್ಡೂರು ಸಿ.ಎನ್.ಜಿ.ಘಟಕಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

Update: 2025-01-02 09:10 GMT

ಬಂಟ್ವಾಳ: ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಬಳಿ ಇರುವ ಸಿ.ಎನ್.ಜಿ. ಘಟಕಕ್ಕೆ ಗುರುವಾರ ಭೇಟಿ ನೀಡಿದರು.

ಘಟಕದ ಕಾರ್ಯ ಚಟುವಟಿಕೆಗಳನ್ನು ವೀಕ್ಷಿಸಿದ ಅವರು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಇಂತಹ ಪ್ರಯತ್ನಗಳು ಸಹಕಾರಿ ಎಂದು ಘಟಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಉನ್ನತ್ ಆರ್.ನಾಯ್ಕ್ ಘಟಕದಲ್ಲಿ ಅಟೋ ಗ್ಯಾಸ್ ಪ್ರಾಯೋಗಿಕ ವಿತರಣೆಗೆ ಅನುಕೂಲ ಕಲ್ಪಿಸಲಾಗಿರುವ ಬಗ್ಗೆ ಮಾಹಿತಿ ನೀಡಿದರು.

ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಶಾಸಕ ವೈ.ಭರತ್ ಶೆಟ್ಟಿ, ಮಂಗಳೂರು ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ಸಂಜಯ್ ಪ್ರಭು, ದೇವದಾಸ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯತೀಶ್ ಅರ್ವಾರ್, ಸಚಿನ್ ಅಡಪ, ಪವನ್ ಕುಮಾರ್, ರವೀಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News