ಕನ್ನಂಗಾರ್ ಉರೂಸ್: ಧ್ವಜಾರೋಹಣ
Update: 2025-04-11 23:04 IST

ಪಡುಬಿದ್ರಿ: ಹೆಜಮಾಡಿಯ ಕನ್ನಂಗಾರ್ ಜುಮ್ಮಾ ಮಸೀದಿಯ ಮುಂಭಾಗದಲ್ಲಿರುವ ಶೈಖುನಾ ಸಿರಾಜುದ್ದೀನ್ ವಲಿಯುಲ್ಲಾಹಿ (ಖ.ಸಿ) ದರ್ಗಾ ಶರೀಫ್‍ನಲ್ಲಿ ಮೂರು ವರ್ಷಗಳಿಗೊಮ್ಮೆ ನಡೆಯುವ ಕನ್ನಂಗಾರ್ ಉರೂಸ್-2025 ಸಮಾರಂಭಕ್ಕೆ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.
ಶುಕ್ರವಾರ ಜುಮಾ ನಮಾಜಿನ ಬಳಿಕ ಅಸಯ್ಯದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಳ್ ದರ್ಗಾದಲ್ಲಿ ದುವಾ ನೆರವೇರಿಸಿದರು. ಬಳಿಕ ಮಸೀದಿ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಜುಮಾ ಮಸೀದಿ ಮುದರ್ರಿಸ್ ಅಶ್ರಫ್ ಸಖಾಫಿ ಕಿನ್ಯ, ಕನ್ನಂಗಾರ್ ಉರೂಸ್ ಸಮಿತಿಯ ಅಧ್ಯಕ್ಷ ಹಾಜಿ ಗುಲಾಂ ಮುಹಮ್ಮದ್ ಹೆಜಮಾಡಿ, ಉರೂಸ್ ಸಮಿತಿಯ ಕಾರ್ಯದರ್ಶಿ ರಕೀಬ್ ಕನ್ನಂಗಾರ್, ಉಪಾಧ್ಯಕ್ಷ ರಾದ ಹನೀಫ್ ಹಾಜಿ, ಇಬ್ರಾಹಿಂ ಸನಾ, ಕೋಶಾಧಿಕಾರಿ ಹಾಜಿ ಕಬೀರ್, ಕನ್ನಂಗಾರ್ ಜುಮಾ ಮಸೀದಿ ಸಮಿತಿಯ ಅಧ್ಯಕ್ಷ ಹಮೀದ್ ಹಾಜಿ, ಉಪಾಧ್ಯಕ್ಷ ಅಬ್ದುಲ್ ಹಮೀದ್ ಮಿಲಾಫ್ ಉಪಸ್ಥಿತರಿದ್ದರು.