ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ

Update: 2024-04-13 08:16 GMT
ಪ್ರಧಾನಿ ನರೇಂದ್ರ ಮೋದಿ (File Photo)

ಮಂಗಳೂರು, ಎ.13: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಎ.14ರಂದು ಮಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸುನೀಲ್ ಕುಮಾರ್, ನಿಗದಿತ ಸಮಯಕ್ಕಿಂತ 45 ನಿಮಿಷ ತಡವಾಗಿ ಕಾರ್ಯಕ್ರಮ ಆರಂಭವಾಗಲಿದೆ. ಈ ಹಿಂದೆ ಸಂಜೆ 7 ಗಂಟೆಗೆ ರೋಡ್ ಶೋ ಸಮಯ ನಿಗದಿಯಾಗಿತ್ತು. ಆದರೆ ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಪ್ರಧಾನಿ ಮೋದಿ 7:45ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ. ನಾರಾಯಣ ಗುರು ಸರ್ಕಲ್ ಬಳಿ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಆರಂಭಿಸಲಿದ್ದಾರೆ ಎಂದು ತಿಳಿಸಿದರು.

ನವಭಾರತ್ ಸರ್ಕಲ್ ವರೆಗೆ ರೋಡ್ ಶೋ ನಡೆಯಲಿದೆ. 8:30ರ ಒಳಗೆ ರೋಡ್ ಶೋ ಮುಗಿಯಲಿದೆ. ಆದ್ದರಿಂದ ಸಾರ್ವಜನಿಕರು 6:45ರಿಂದ 7 ಗಂಟೆಯೊಳಗೆ ರಸ್ತೆಯ ಎರಡು ಬದಿಗಳಲ್ಲಿ ನಿಗದಿತ ಸ್ಥಳದಲ್ಲಿ ಸೇರಬೇಕು ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News