ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಜನ ಜಾಗೃತಿ ಅಗತ್ಯ: ಸ್ಪೀಕರ್ ಯು ಟಿ ಖಾದರ್

Update: 2024-09-11 12:25 GMT

ಮಂಗಳೂರು: ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿಗಳ ಕುರಿತು ಜನ ಜಾಗ್ರತಿ ಮೂಡಿಸುವ ಕೆಲಸಗಳನ್ನು ಸಂಘ ಸಂಸ್ಥೆ ಗಳು ಮಾಡಬೇಕು. ಇದನ್ನು ಸಂಪೂರ್ಣ ನಿಯಂತ್ರಿಸಲು ಜನರ ಸಹಭಾಗಿತ್ವ ಅಗತ್ಯ ಇದೆ ಎಂದು‌ ಸ್ಪೀಕರ್ ಯು ಟಿ ಖಾದರ್ ಹೇಳಿದರು.

ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ನೂತನವಾಗಿ ರಚನೆಯಾದ ಸ್ವಚ್ಚ ಪರಿಸರ ಪ್ರತಿಷ್ಠಾನವನ್ನು  ಉದ್ಘಾಟಿಸಿ ಮಾತನಾಡಿದರು.

ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಷ್ಠಾನ ಮುತುವರ್ಜಿಯಿಂದ ಕೆಲಸ ಮಾಡಬೇಕು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳನ್ನು ಪ್ಲಾಸ್ಟಿಕ್ ಜಾಗೃತಿ ಅಭಿಯಾನದಲ್ಲಿ ತೋಡಗಿಸಿ ಕೊಳ್ಳುವಂತೆ ಸಲಹೆ ನೀಡಿದರು.

ಸ್ವಚ್ಚ ಪರಿಸರ ಪ್ರತಿಷ್ಠಾನ ಟ್ರಸ್ಟಿ ಸಂತೋಷ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಮಕೃಷ್ಣ ಮಿಷನ್ ಸ್ವಚ್ಚ ಮಂಗಳೂರು ಅಭಿಯಾನದ ಮುಖ್ಯ ಸಂಯೋಜಕ ರಂಜನ್ ಬೆಳ್ಳಪಾರ್ದಿ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಮಾಜಿ ಉಪ ಮೇಯರ್ ಸುಮಂಗಲ ರಾವ್, ಪಾಲಿಕೆ ಸದಸ್ಯ ವಿನಯರಾಜ್, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಶೇಷಪ್ಪ ಅಮೀನ್, ಡಾ ಜೆಬಿ ಸಲ್ಡಾನಾ, ಹರೇಕಳ ಜುಮ್ಮಾ ಮಸೀದಿ ಧರ್ಮ ಗುರು ಯಾಕೂಬ್ ಸಅದಿ ಉಪಸ್ಥಿತರಿದ್ದರು.

ಪುಷ್ಪರಾಜ್ ಸ್ವಾಗತಿಸಿ ವಂದಿಸಿದರು. ಪ್ರಿಯಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News