ಪುತ್ತೂರು: ಮರದಿಂದ ಬಿದ್ದು ವ್ಯಕ್ತಿ ಸಾವು

Update: 2024-03-23 20:19 IST
ಪುತ್ತೂರು: ಮರದಿಂದ ಬಿದ್ದು ವ್ಯಕ್ತಿ ಸಾವು

ಸಾಂದರ್ಭಿಕ ಚಿತ್ರ (Image by bearfotos on Freepik)

  • whatsapp icon

ಪುತ್ತೂರು: ಮರದಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ದಿ.ಅಣ್ಣಯ್ಯ ನಾಯ್ಕ ಎಂಬವರ ಪುತ್ರ ಕೃಷ್ಣಪ್ಪ(55) ಮೃತಪಟ್ಟ ವ್ಯಕ್ತಿ. ಅವರು ತನ್ನ ಮನೆಯ ಹತ್ತಿರದ ತೋಟದಲ್ಲಿ ಶುಕ್ರವಾರ ಮರವೊಂದಕ್ಕೆ ಹತ್ತಿ ಅದರ ಕೊಂಬೆ ಕಡಿಯುತ್ತಿರುವ ಸಂದರ್ಭದಲ್ಲಿ ಆಯತಪ್ಪಿ ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಬಳಿಕ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News