ವಿಟ್ಲ| ಮಾಣಿಯಲ್ಲಿ ರಸ್ತೆ ಅಪಘಾತ: ಸ್ಥಳದಲ್ಲೇ ಬಾಲಕ ಮೃತ್ಯು; ದಂಪತಿಗೆ ಗಂಭೀರ ಗಾಯ

Update: 2024-12-28 18:00 GMT

ವಿಟ್ಲ: ಈಚರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 6 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕಿನಲ್ಲಿದ್ದ ದಂಪತಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಭವಿಸಿದೆ.

ಮೃತ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಎಂಬವರ ಪುತ್ರ ಶಾಝಿನ್ (6) ಎಂದು ಗುರುತಿಸಲಾಗಿದೆ. ಸಲೀಂ ಅವರು ತನ್ನ ಪತ್ನಿ-ಮಕ್ಕಳೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗಡಿಯಾರ ಎಂಬಲ್ಲಿ ಈಚರ್ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದಿಂದ ಬೈಕಿನಲ್ಲಿದ್ದ ಶಾಝಿನ್ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಗಾಯಗೊಂಡ ಅಬ್ದುಲ್ ಸಲೀಂ, ಅವರ ಪತ್ನಿ ಹಾಗೂ ಇನ್ನಿಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News