ಸೌದಿಯಲ್ಲಿ ರಸ್ತೆ ಅಪಘಾತ: ಉಳ್ಳಾಲದ ಮಹಿಳೆ, ಮಗು ಸ್ಥಳದಲ್ಲೇ ಮೃತ್ಯು

Update: 2024-09-21 16:41 GMT

ಉಳ್ಳಾಲ: ರಸ್ತೆ ಅಪಘಾತದಲ್ಲಿ ಉಳ್ಳಾಲ ನಿವಾಸಿ ಮಹಿಳೆ ಹಾಗೂ ಅವರ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ದಮಾಮ್ ಬಳಿ ಶುಕ್ರವಾರ ನಡೆದಿದೆ.

ಹೈದರ್ ಉಳ್ಳಾಲ್ ಅವರ ಪುತ್ರಿ ಸಫಾ ಫಾತಿಮಾ (30) ಹಾಗೂ ಎರಡೂವರೆ ವರ್ಷದ ಅವರ ಮೊಮ್ಮಗ ಮೃತರು ಎಂದು ಗುರುತಿಸಲಾಗಿದೆ.

ಶುಕ್ರವಾರ ಸಂಜೆ ವೇಳೆ ಮದೀನದಿಂದ ಕಾರಿನಲ್ಲಿ ಸಫಾ ಫಾತಿಮಾ(30) ತನ್ನ ಪತಿ ಮಲಪುರಂ ಆರಿಕೋಡ್‌ನ ಸುಹೈಲ್ (35) ಮತ್ತು ಸಹೋದರ ಮುಹವಿಯ(23) ಎಂಬವರು ದಮಾಮ್ ನಲ್ಲಿರುವ ಹೈದರ್ ಉಳ್ಳಾಲ್ ಅವರ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರು ಅಪಘಾತವಾಗಿದೆ.

ಕಾರಿನಲ್ಲಿದ್ದ ಸುಹೈಲ್, ಮಕ್ಕಳಾದ ಅಬ್ದುಲ್ ಮಲಿಕ್ (7), ಅಬ್ದುಲ್ ರಹಿಮಾನ್ (6) ಹಾಗೂ ಅಹ್ಮದ್ (5) ಗಾಯಗೊಂಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News