ಜು.25ರಂದು ಸುಳ್ಯ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Update: 2023-07-24 12:24 GMT

ಸುಳ್ಯ: ತಾಲೂಕಿನ ಶಾಲೆ, ಕಾಲೇಜುಗಳಿಗೆ (ಪದವಿ‌ ಪೂರ್ವ ಕಾಲೇಜುಗಳವರೆಗೆ) ಜು.25ರಂದು ರಜೆ ಘೋಷಿಸಲಾಗಿದೆ.

ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ 21 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು, ಅರೆಂಜ್ ಅಲರ್ಟ್ ಘೋಷಣೆಯಾಗಿರುತ್ತದೆ.ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಳ್ಯ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.25ರಂದು ರಜೆಯನ್ನು ಘೋಷಿಸಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ಹಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ಹಹಿಸುವುದು.

ತಾಲೂಕು ಆಡಳಿತದಿಂದ ವಿವಿಧ ಪುದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ತಹಶೀಲ್ದಾರರು ಸುಳ್ಯ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಸುಳ್ಯ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಟ್ರೋಲ್ ರೂಂ 08257-231231 ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.




 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News