ಶಂಸುಲ್ ಉಲಮಾ ಮಹಿಳಾ ಕಾಲೇಜ್ ವಿದ್ಯಾರ್ಥಿನಿಯರಿಗೆ ಅಭಿನಂದನಾ ಕಾರ್ಯಕ್ರಮ

Update: 2023-11-18 16:02 GMT

ಉಪ್ಪಿನಂಗಡಿ: ಯಾವುದೇ ಸಮಾಜ ಪ್ರಗತಿ ಪಥದಲ್ಲಿ ಸಾಗಬೇಕಿದ್ದರೆ ಕಾಲದ ಬೇಡಿಕೆಯನುಸಾರ ಉತ್ತಮ ದರ್ಜೆಯ ಶಿಕ್ಷಣದ ಅಗತ್ಯವಿದೆ. ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸಮಾನ ಶಿಕ್ಷಣವನ್ನು ನೀಡಿ ಅವರನ್ನು ಸುಶಿಕ್ಷಿತರನ್ನಾಗಿ ರೂಪಿಸಿದರೆ ಮುಂದಿನ ಪೀಳಿಗೆಯು ಸ್ವಾಭಿಮಾನದಿಂದ ಬದುಕಲು ಸಾಧ್ಯ. ಯಾವುದೋ ಕಹಿ ಘಟನೆಗಳನ್ನು ಮುಂದಿಟ್ಟು ಮಹಿಳಾ ಶಿಕ್ಷಣವನ್ನು ಕೀಳಂದಾಜಿಸುವುದು ಮತ್ತು ಅಡ್ಡಿಪಡಿಸುವುದು ಸಮಂಜಸವಲ್ಲ ಎಂದು ಕೆಮ್ಮಾರ ಶಂಸುಲ್ ಉಲಮಾ ಮಹಿಳಾ ಕಾಲೇಜು ಅಧ್ಯಕ್ಷ ಎಸ್.ಬಿ. ಮುಹಮ್ಮದ್ ದಾರಿಮಿ ಅಭಿಪ್ರಾಯಪಟ್ಟರು.

‘ಸಮಸ್ತ’ದ ಫಾಳಿಲಾ- ಫಳೀಲಾ ಕಾಲೇಜುಗಳ ರಾಜ್ಯ ಮಟ್ಟದ ಹಿಯಾ ಫಿಯೆಸ್ಟ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಕೆಮ್ಮಾರ ಶಂಸುಲ್ ಉಲಮಾ ಮಹಿಳಾ ಕಾಲೇಜು ವಿದ್ಯಾರ್ಥಿನಿಯರನ್ನು ಆಡಳಿತ ಸಮಿತಿಯ ವತಿಯಿಂದ ಕಾಲೇಜಿನಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರಾದ ಅಬ್ದುರ‌್ರಹ್ಮಾನ್ ಫೈಝಿ ಪೆರಿಯಡ್ಕ, ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜು ಅಧ್ಯಾಪಕ ಕೆ.ಎಂ.ಎ.ಕೊಡುಂಗಾಯಿ ಮಾತನಾಡಿದರು.

ಉಪನ್ಯಾಸಕಿಯರ ನೇತೃತ್ವದಲ್ಲಿ ವಿವಿಧ ಪ್ರತಿಭಾ ಕಾರ್ಯಕ್ರಮ ಮತ್ತು ಸ್ಮರಣಿಕೆಗಳನ್ನು ವಿತರಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News