ಮುಂಬೈ- ಮಂಗಳೂರು ಜಂಕ್ಷನ್ ನಡುವೆ ವಿಶೇಷ ಸಾಪ್ತಾಹಿಕ ರೈಲು

Update: 2023-10-13 16:24 GMT

ಫೈಲ್‌ ಫೋಟೊ 

ಉಡುಪಿ, ಅ.13: ನವರಾತ್ರಿ ಪೂಜಾ ಮತ್ತು ದೀಪಾವಳಿಯ ಪ್ರಯುಕ್ತ ಜನದಟ್ಟಣೆಯ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆಯು, ಸೆಂಟ್ರಲ್ ರೈಲ್ವೆ ಹಾಗೂ ಸದರ್ನ್ ರೈಲ್ವೆಯ ಸಹಯೋಗದೊಂದಿಗೆ ಮುಂಬೈ ಲೋಕಮಾನ್ಯ ತಿಲಕ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಪೂಜಾ-ದಿವಾಳಿ ಹಬ್ಬದ ವಿಶೇಷ ಸಾಪ್ತಾಹಿಕ ರೈಲನ್ನು ಓಡಿಸಲು ನಿರ್ಧರಿಸಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ರೈಲು ನಂ. 01185 ಲೋಕಮಾನ್ಯ ತಿಲಕ್- ಮಂಗಳೂರು ಜಂಕ್ಷನ್ ಸಾಪ್ತಾಹಿಕ ವಿಶೇಷ ರೈಲು ಅ.20ರಿಂದ ಡಿ.1ರವರೆಗೆ ಪ್ರತಿ ಶುಕ್ರವಾರ ರಾತ್ರಿ 10:15ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣದಿಂದ ಪ್ರಯಾಣ ಪ್ರಾರಂಭಿಸಿ ಮರುದಿನ ಸಂಜೆ 5:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಅದೇ ರೀತಿ ರೈಲು ನಂ.01186 ಮಂಗಳೂರು ಜಂಕ್ಷನ್- ಲೋಕಮಾನ್ಯ ತಿಲಕ್ ಮುಂಬೈ ಸಾಪ್ತಾಹಿಕ ರೈಲು ಅ.21ರಿಂದ ಡಿ.2ರವರೆಗೆ ಪ್ರತಿ ಶನಿವಾರ ಸಂಜೆ 6:45ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಅಪರಾಹ್ನ 2:25ಕ್ಕೆ ಮುಂಬೈ ಲೋಕಮಾನ್ಯ ತಿಲಕ್ ನಿಲ್ದಾಣ ತಲುಪಲಿದೆ.

ಈ ರೈಲಿಗೆ ಥಾಣೆ, ಪನ್ವೇಲ್, ರೋಹಾ, ಮಂಗಾಂವ್, ಖೇಡ್, ಚಿಪ್ಳುಣ್, ಸಂಗಮೇಶ್ವರ ರೋಡ್, ರತ್ನಗಿರಿ, ಕಂಕವಲ್ಲಿ, ಸಿಂಧುದುರ್ಗ, ಕುಡಾಲ್, ಸಾವಂತವಾಡಿ ರೋಡ್, ಥೀವಿಂ, ಕರ್ಮಾಲಿ, ಮಡಗಾಂವ್ ಜಂಕ್ಷನ್, ಕಾರವಾರ, ಗೋಕರ್ಣ ರೋಡ್, ಕುಮಟ, ಮುರ್ಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್ ಬೈಂದೂರು, ಕುಂದಾಪುರ, ಉಡುಪಿ, ಮುಲ್ಕಿ ಹಾಗೂ ಸುರತ್ಕಲ್ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.

ಈ ರೈಲು ಒಟ್ಟು 21 ಕೋಚ್‌ಗಳನ್ನು ಹೊಂದಿರುತ್ತದೆ. ಇವುಗಳಲ್ಲಿ 2ಟಯರ್ ಎಸಿ-1, 3ಟಯರ್ ಎಸಿ-5, ಸ್ಲೀಪರ್ ಕೋಚ್-8, ಜನರಲ್-5, ಎಸ್‌ಎಲ್‌ಆರ್-2 ಕೋಚ್‌ಗಳಿರುತ್ತವೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News