ಸುಳ್ಯ: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಢಿಕ್ಕಿಯಾದ ಕಾರು; ಮೂವರು ಮೃತ್ಯು

Update: 2023-08-31 09:06 GMT

ಸುಳ್ಯ:  ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಅಡ್ಕಾರಿನಲ್ಲಿ ಗುರುವಾರ ನಡೆದಿದೆ.

ಮೃತ ಕಾರ್ಮಿಕರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಎಂದು ಗುರುತಿಸಲಾಗಿದೆ. ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರಿಗೆ ಢಿಕ್ಕಿಯಾಗಿದ್ದಲ್ಲದೇ ಪಕ್ಕದಲ್ಲಿ ನಿಂತಿದ್ದ ಲಾರಿಗೂ ಢಿಕ್ಕಿ ಹೊಡೆದಿದೆ.

 ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು,  ವೆಂಕಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ‌ ಎಂದು ತಿಳಿದುಬಂದಿದೆ.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News