ಸುರತ್ಕಲ್: ಅಥೆಂಟಿಕ್ ಓಷನ್ ಟ್ರೆಷರ್ ನಲ್ಲಿ ಬೆಂಕಿ ಆಕಸ್ಮಿಕ; 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿ

Update: 2024-07-15 05:15 GMT

ಸುರತ್ಕಲ್: ಇಲ್ಲಿನ‌ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಅಥೆಂಟಿಕ್ ಓಷನ್ ಟ್ರೆಷರ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ರವಿವಾರ ಮಧ್ಯಾಹ್ನ ಸಂಭವಿಸಿದೆ.

ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ನೌಕರರು ಯಾರು ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಥೆಂಟಿಕ್ ಓಷನ್ ಟ್ರೆಷರ್ ನ ಮೂಲವೊಂದು ಮಾಹಿತಿ ನೀಡಿದೆ.

ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ.

ಸದ್ಯ ಕೈಗಾರಿಕಾ ವಲಯ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿದು ಬಂದಿದೆ.

ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಯ ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News