ಸುರತ್ಕಲ್ : ರಸ್ತೆ ಅಪಘಾತ; ಯುವಕ ಮೃತ್ಯು

Update: 2024-09-06 05:18 GMT

ಸುರತ್ಕಲ್ : ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ.

ಗಣೇಶ ಅವರು ಪಣಂಬೂರು ಬಂದರ್ ನಲ್ಲಿ ಉದ್ಯೋಗದಲ್ಲಿದ್ದು, ಬೆಳಗ್ಗೆ 7ಗಂಟೆಯ ಸುಮಾರಿಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಕಂಟೈನರ್ ಲಾರಿಯೊಂದನ್ನು ಓವರ್ ಮುಂದಿನ ಟೇಕ್ ಮಾಡುವ ಭರದಲ್ಲಿ ಅದಕ್ಕೆ ತಾಗಿ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭ ಲಾರಿಯ ಚಕ್ರ ಅವರ ಮೈಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


 

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News