ಮಂಗಳೂರು: ಆ. 12ರಂದು ದುಬೈ ಬಿಸಿಎಫ್ ನಿಂದ ವಿದ್ಯಾರ್ಥಿ ವೇತನ ವಿತರಣೆ

Update: 2023-08-10 07:09 GMT

ಮಂಗಳೂರು, ಆ.10: ಆಥಿರ್ಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದುಬೈನ ಬ್ಯಾರೀಸ ಕಲ್ಚರಲ್ ಫೋರಂ (ಬಿಸಿಎಫ್)ನಿಂದ ನೀಡಲಾಗುವ ವಿದ್ಯಾರ್ಥಿ ವೇತನ ಹಾಗೂ ದ.ಕ. ಜಿಲ್ಲೆಯ 35 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಆ. 12ರಂದು ನಡೆಯಲಿದೆ.

ಸುದ್ದಿಗೋಷ್ಟಿಯಲ್ಲಿ ಗುರುವಾರ ಈ ವಿಷಯ ತಿಳಿಸಿದ ಬಿಸಿಎಫ್ ಸ್ಕಾಲರ್ಶಿಪ್ ಕಮಿಟಿಯ ಅಧ್ಯಕ್ಷ ಎಂ.ಇ. ಮೂಳೂರು, ಕಾಟಿಪಳ್ಳದ ಮಿಸ್ಬಾಹ್ ಮಹಿಳಾ ಕಾಲೇಜಿನಲ್ಲಿ ಬೆಳಗ್ಗೆ 8.30ಕ್ಕೆ ಯುಎಇ ಲಂಡನ್ ಅಮೆರಿಕನ್ ಸಿಟಿ ಕಾಲೇಜಿನ ನಿರ್ದೇಶಕ ಡಾ. ಪ್ರೊ. ಕಾಪು ಮುಹಮ್ಮದ್ ಹಾಗೂ ಮನಾಲ್ ಕಾಪು ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದರು.

ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬಿಸಿಎಫ್ನ ಅಧ್ಯಕ್ಷ ಡಾ.ಬಿ.ಕೆ. ಯೂಸುಫ್ ವಹಿಸಲಿದ್ದಾರೆ. ಈ ವರ್ಷ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗಿನ 150ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಕಳೆದ 20 ವರ್ಷಗಳಿಂದ ಸಂಸ್ಥೆಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಶೈಕ್ಷಕ ಮಾನದಂಡಕ್ಕಿಂತಲೂ ಮುಖ್ಯವಾಗಿ ಕೌಟುಂಬಿಕ ಆರ್ಥಿಕ ಪರಿಸ್ಥಿತಿಯನ್ನು ಪರಿಗಸಿ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಎಸೆಸೆಲ್ಸಿ, ಪಿಯುಸಿ ಮತ್ತು ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಗೋಷ್ಟಿಯಲ್ಲಿ ಬಿಸಿಎಫ್ ನಿಂದ ಪ್ರಧಾನ ಕಾರ್ಯದರ್ಶಿ ಡಾ. ಕಾಪು ಮುಹ್ಮದ್, ಉಪಾಧ್ಯಕ್ಷ ಅಬ್ದುಲ್ ಲತೀಫ್ ಮುಲ್ಕಿ ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News