ಸುಳ್ಯ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ 4 ದಿನಗಳ ಬಳಿಕ ಘಟನಾ ಸ್ಥಳದಿಂದ 4 ಕಿ.ಮೀ. ದೂರದಲ್ಲಿ ಪತ್ತೆ

Update: 2023-07-09 09:27 GMT

ನಾರಾಯಣನ್

ಸುಳ್ಯ, ಜು.9: ನಾಲ್ಕು ದಿನಗಳ ಹಿಂದೆ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲುಜಾರಿ ಬಿದ್ದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ.

ಕಾಸರಗೋಡು ಜಿಲ್ಲೆಯಈಸ್ಟ್ ಎಳೇರಿ ಪಂಚಾಯತ್ನ ಚಿಟ್ಟಾರಿಕಾಲ್ ಸಮೀಪದ ಕಡುಮೇನಿಯ ನಾರಾಯಣನ್ (45) ಮೃತಪಟ್ಟವರು. ಇವರ ಮೃತದೇಹವೂ 3 ದಿನಗಳ ತೀವ್ರ ಶೋಧದ ಬಳಿಕ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದ ಸ್ಥಳದಿಂದ 4 ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಎಸ್.ಡಿ.ಆರ್.ಎಫ್. ತಂಡ ಮೇಲೆತ್ತಿದೆ.

ಕೂರ್ನಡ್ಕದಲ್ಲಿ ಗುರುವಾರ ಸಂಜೆ ಕಾಲುಸಂಕ ದಾಟುತ್ತಿದ್ದ ವೇಳೆ ನಾರಾಯಣನ್ ಆಕಸ್ಮಿಕವಾಗಿ ಕಾಲುಜಾರಿ ಪಯಸ್ವಿನಿ ನದಿಯನ್ನು ಸಂಪರ್ಕಿಸುವ ತೋಡಿಗೆ ಬಿದ್ದು ನಾಪತ್ತೆಯಾಗಿದ್ದರು. ಅವರಿಗಾಗಿ ಕಳೆದ ಮೂರು ದಿನಗಳಿಂದ ಅಗ್ನಿಶಾಮಕ ದಳ, ಪೊಲೀಸ್, ಎಸ್.ಡಿ.ಆರ್.ಎಫ್. ತಂಡ ಹಾಗೂ ಸ್ಥಳೀಯ ಈಜುಗಾರರು ಭಾರೀ ಮಳೆಯ ನಡುವೆ ನಿರಂತರ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಮಧ್ಯಾಹ್ನ ಘಟನೆ ಸಂಭವಿಸಿದ ಸ್ಥಳದಿಂದ ಸುಮಾರು 4 ಕಿ.ಮೀ. ದೂರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News