ಅನೈತಿಕ ಪೊಲೀಸ್ ಗಿರಿ ಯಾವುದೇ ಕಾರಣಕ್ಕೂ ಸಹಿಸಲ್ಲ: ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿರುವವರನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಠಿಸುವುದು.ದಬ್ಬಾಳಿಕೆ,ದೌರ್ಜನ್ಯ ಮಾಡುವವರನ್ನು ಸಹಿಸಲು ಸಾಧ್ಯವಿಲ್ಲ.ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಅವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆಸೂಚನೆ ನೀಡಿದ್ದೇನೆ ಎಂದರು.
ಜಿಲ್ಲೆಗೆ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿದೆ.ವಿದ್ಯಾರ್ಥಿಗಳಿಗೆ ಮಂಗಳೂರಿನಲ್ಲಿ ವಿದ್ಯಾರ್ಜನೆ ಮಾಡಲು ಭಯ ಆಗುತ್ತಿದೆ. ಅಡ್ಮಿಷನ್ ಆಗಿದೆ ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಅಂತಾ ವಿದ್ಯಾರ್ಥಿಗಳು ನನಗೆ ಹೇಳುತ್ತಿದ್ದಾರೆ. ಭಯ ಪಡಬೇಡಿ ಅಂತಾ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದೇನೆ ಎಂದು ಹೇಳಿದರು.
ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ಈ ಕೆಲಸ ನಡೆಯುತ್ತಿದೆ.ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸೇರಿಕೊಳ್ಳುತ್ತಿದೆ. ಇಂತಹ ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆಯೇ ?ಬಿಜೆಪಿಗೆ ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡವಾ?ಬಿಜೆಪಿ ಜಿಲ್ಲೆಯ ಶಾಂತಿಗೆ ಸಹಕಾರವನ್ನು ನೀಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.