ಉಜಿರೆ: ತಂದೆಯಿಂದ ಮಗನ ಕೊಲೆ
Update: 2023-10-30 05:48 GMT
ಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಮೃತ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್(30) ಎಂದು ಗುರುತಿಸಲಾಗಿದೆ. ಈತನ ತಂದೆ ಕೃಷ್ಣಯ್ಯ ಆಚಾರ್ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ
ರಾತ್ರಿಯ ವೇಳೆ ತಂದೆ ಹಾಗೂ ಮಗನ ನಡುವೆ ಮಾತಿನ ಜಗಳ ನಡೆದಿದೆ. ಇದದಾದ ಬಳಿಕ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾಗ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಬಾಗಿಲು ತೆಗೆದ ಕೃಷ್ಣಯ್ಯ ಆಚಾರ್ ಕೋಣೆಯ ಒಳಗಿನಿಂದ ಹೊರಬಂದು ಜಗದೀಶನಿಗೆ ಚೂರಿಯಿಂದ ಇರಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಮೃತಪಟ್ಟಿದ್ದಾನೆ. ಈ ಬಗ್ಗೆ ಜಗದೀಶನ ಅಣ್ಣ ಗಣೇಶ್ ನೀಡಿರುವ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.