ಉಳ್ಳಾಲ: ರಸ್ತೆ ಅಪಘಾತ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

Update: 2025-01-01 05:40 GMT

ಉಳ್ಳಾಲ:  ಸ್ಕೂಟರ್ ಗೆ  ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸಂಕೊಳಿಗೆ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಮೃತ ಸವಾರ ನನ್ನು ನಾಟೆಕಲ್  ಪನೀರ್ ನಿವಾಸಿ ಉಮ್ಮರ್ ಫಾರೂಕ್ ಯಾನೆ ಅಝರ್(33) ಎಂದು ಗುರುತಿಸಲಾಗಿದೆ . ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅಝರ್, ಮಂಗಳವಾರ ರಾತ್ರಿ ತಲಪಾಡಿ ಯಿಂದ ಬರುತ್ತಿದ್ದ ವೇಳೆ ಸಂಕೊಳಿಗೆ ಹಾಲ್ ಬಳಿ ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ಸ್ಕೂಟರ್ ಗೆ ತಾಗಿದೆ ಎನ್ನಲಾಗಿದೆ. ಈ ವೇಳೆ ಸವಾರ ಅಝರ್ ರಸ್ತೆಗೆಸೆಯಲ್ಪಟ್ಟಿದ್ದು, ಈಸಂದರ್ಭ ಲಾರಿಯ ಹಿಂಬದಿ ಚಕ್ರ ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು.

ಅಝರ್ ಅವರ ಮೃತದೇಹವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಕಾರಣವಾದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News