ಮಂಗಳೂರಿನಿಂದ ಹೊರಡಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

Update: 2023-12-25 17:22 GMT

ಮಂಗಳೂರು: ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ತಲುಪಿದ್ದು, ಈ ರೈಲು ಮಂಗಳವಾರದಿಂದ ಮೂರು ದಿನ ಪ್ರಾಯೋಗಿಕ ಓಡಾಟ ನಡೆಸಲಿದೆ.

ಮಂಗಳವಾರ ಬೆಳಗ್ಗೆ 8:30ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಮಧ್ಯಾಹ್ನ 1:15ಕ್ಕೆ ಮಡಗಾಂವ್ (ಗೋವಾ) ತಲುಪಲಿದೆ. ವಾಪಾಸು ಮಧ್ಯಾಹ್ನ 1:45ಕ್ಕೆ ಮಡಗಾಂವ್ ನಿಂದ ಹೊರಟು ಸಂಜೆ 6:30ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.

ನೂತನ ರೈಲು ಚೆನ್ನೈಯಿಂದ ಹೊರಟು ಕೇರಳದ ಕೋಝಿಕೋಡ್ ಮಾರ್ಗ ಸೋಮವಾರ ಮಂಗಳೂರು ತಲುಪಿದೆ.

ಮಂಗಳೂರು ಸೆಂಟ್ರಲ್ - ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ಡಿಸೆಂಬರ್ 30ರಂದು ಆರಂಭಿಸಲು ದಕ್ಷಿಣ ರೈಲ್ವೆ ಸಜ್ಜಾಗಿದೆ. ಆದರೆ ಈ ಬಗ್ಗೆ ರೈಲ್ವೆ ಮಂಡಳಿ ಅಧಿಕೃತ ಪ್ರಕಟನೆ ಹೊರಡಿಸಿಲ್ಲ.

ಮಂಗಳೂರು - ಮಡಗಾಂವ್ ಸಹಿತ 6 ವಂದೇಭಾರತ್ ಎಕ್ಸ್‌ಪ್ರೆಸ್ ರೈಲುಗಳು ಹಾಗೂ ಮಂಗಳೂರು ಸೆಂಟ್ರಲ್ ನಿಲ್ದಾಣದ ಹೆಚ್ಚುವರಿ ಪ್ಲಾಟ್ ಫಾರಂ ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸುವ ನಿರೀಕ್ಷೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.





 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News