ಮರಕಡ | ಮಸೀದಿಯೊಳಗೆ ಪ್ರವೇಶಿಸಿ ವೀಡಿಯೊ ಚಿತ್ರೀಕರಣ; ಆರೋಪಿ ಹನುಮಂತನ ಬಂಧನ

Update: 2024-01-27 12:27 IST
ಮರಕಡ | ಮಸೀದಿಯೊಳಗೆ ಪ್ರವೇಶಿಸಿ ವೀಡಿಯೊ ಚಿತ್ರೀಕರಣ; ಆರೋಪಿ ಹನುಮಂತನ ಬಂಧನ
  • whatsapp icon

ಮಂಗಳೂರು, ಜ.27: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ ಸಮೀಪದ ಮಿಲ್ಲತ್ ನಗರದ ಮಸೀದಿಗೆ ಅಕ್ರಮವಾಗಿ ಪ್ರವೇಶಿಸಿ ವೀಡಿಯೊ ಚಿತ್ರೀಕರಣ ಮಾಡಿದ ಆರೋಪಿ ಹನುಮಂತ ಎಂಬಾತನನ್ನು ಬಂಧಿಸಲಾಗಿದೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಮಸೀದಿಯೊಳಗೆ ಪ್ರವೇಶಿಸಿದ ಆರೋಪಿಯು ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ. ಮದ್ಯ ಸೇವನೆ ಮಾಡಿ ತೂರಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ.

ಮೂಲತಃ ಬಾಗಲಕೋಟೆ ಜಿಲ್ಲೆಯವನಾಗಿರುವ ಆರೋಪಿಯು 20 ದಿನಗಳ ಹಿಂದೆ ಕೆಲಸ ಅರಸಿಕೊಂಡು ಮಂಗಳೂರಿಗೆ ಬಂದಿದ್ದ ಎಂದು ತಿಳಿದು ಬಂದಿದೆ.

ಆರೋಪಿಯ ವಿರುದ್ಧ ಸೆ.447, 295, 295(ಎ) ನಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಆಯುಕ್ತರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News