ದಕ್ಷಿಣ ಕನ್ನಡ ಎಸ್‌ ಪಿ ಸಿ.ಬಿ ರಿಷ್ಯಂತ್ ವರ್ಗಾವಣೆ; ನೂತನ ಎಸ್‌ ಪಿಯಾಗಿ ಯತೀಶ್. ಎನ್ ನೇಮಕ

Update: 2024-07-03 07:07 GMT

 ಯತೀಶ್ ಎನ್. |  ಸಿ.ಬಿ.ರಿಷ್ಯಂತ್

ಮಂಗಳೂರು: ಸರಕಾರದ ಆದೇಶದ ಪ್ರಕಾರ, ಯತೀಶ್ ಎನ್. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ  ನೇಮಿಸಲಾಗಿದೆ. ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್ ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

2016 ರ ಕರ್ನಾಟಕ ಕೇಡರ್ ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕ ಲಾಭು ರಾಮ್ ಅವರನ್ನು ಬೆಂಗಳೂರಿನ ಕೇಂದ್ರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News