ದಾವಣಗೆರೆ | ಹೆಜ್ಜೇನು ದಾಳಿಗೆ ರೈತ ಮೃತ್ಯು

Update: 2025-02-20 14:29 IST
ದಾವಣಗೆರೆ | ಹೆಜ್ಜೇನು ದಾಳಿಗೆ ರೈತ ಮೃತ್ಯು

ನಾಗಪ್ಪ (65) 

  • whatsapp icon

ದಾವಣಗೆರೆ : ಹೆಜ್ಜೇನು ದಾಳಿಯಿಂದ ರೈತರೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಹುಚ್ಚವ್ವನಹಳ್ಳಿ ಗ್ರಾಮದ ನಾಗಪ್ಪ (65) ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತ. ಎಂದಿನಂತೆ ಬೆಳಗ್ಗೆ ಜಮೀನಿಗೆ ತೆರಳುತ್ತಿದ್ದಾಗ ಏಕಾಏಕಿ ಹೆಜ್ಜೇನು  ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡು ಅಸ್ವಸ್ಥಗೊಂಡಿದ್ದ ರೈತನನ್ನು ಕೂಡಲೇ ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ರೈತ ಕೊನೆಯುಸಿರೆಳೆದಿದ್ದಾರೆ. ಮೃತ ರೈತನಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ. ಈ ಕುರಿತು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರಿಂದ ಸಾಂತ್ವನ: ಸುದ್ದಿ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ, ಮೃತ ರೈತನ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News