ದಾವಣಗೆರೆ| ಹೊಸ ಮರಳು ನೀತಿ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ: ಸಚಿವ ಮಲ್ಲಿಕಾರ್ಜುನ್
Update: 2024-01-26 15:07 GMT
ದಾವಣಗೆರೆ: ಸರಕಾರ ಹೊಸ ಮರಳು ನೀತಿ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯದಲ್ಲಿ ಗಣಿಗಾರಿಕೆಯಿಂದ ಕಳೆದ ವರ್ಷ 6 ಸಾವಿರ ಕೋಟಿ ರೂ. ಆದಾಯ ಬಂದಿತ್ತು. ಈ ವರ್ಷ 9 ಸಾವಿರ ಕೋಟಿ ರೂ. ಆದಾಯ ಬರುವ ನಿರೀಕ್ಷೆ ಇದೆ. ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಹಲವು ಯೋಜನೆ ರೂಪಿಸಲಾಗಿದೆ ಎಂದರು.
ವಾಹನಗಳಿಗೆ ಜಿಪಿಎಸ್ ಅಳವಡಿಸುವ ಮೂಲಕ ಅಕ್ರಮ ಗಣಿಗಾರಿಕೆ ನಿಯಂತ್ರಣ ತರಲಾಗುತ್ತಿದೆ. ಸುಧಾರಣೆಯ ನಿಟ್ಟಿನಲ್ಲಿ ವೇಗವಾಗಿ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿ, ಇರುವ ಕೆಲ ತೊಡಕು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಗ್ರಾನೈಟ್ ಉತ್ಪಾದನೆ ಕ್ಷೀಣಿಸಿದೆ. ಹೀಗಾಗಿ ಚೀನಾಗೆ ರಫ್ತಾಗುತ್ತಿಲ್ಲ, ಸದ್ಯದಲ್ಲೇ ಮತ್ತೆ ಉತ್ಪಾದನೆ ಆರಂಭಿಸಲಾಗುವುದು ಎಂದು ಹೇಳಿದರು.