146 ಸಂಸದರ ಅಮಾನತು ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Update: 2023-12-22 17:12 GMT

ದಾವಣಗೆರೆ: ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ 146 ಸಂಸದರನ್ನು ಸಂಸತ್ತಿನಿಂದ ಅಮಾನತುಗೊಳಿಸಿದ ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಂಸತ್ತಿನ ಭದ್ರತಾ ವೈಫಲ್ಯದ ಸಂಬಂಧ  ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ವಿರೋಧ ಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ಜಿಲ್ಲಾಧ್ಯಕ್ಷ ಹೆಚ್.ಬಿ ಮಂಜಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ, ವಿರೋಧ ಪಕ್ಷದ ನಾಯಕರನ್ನು ಹೊರಗಿಟ್ಟು ಮೂರು ಮಸೂದೆಗಳಿಗೆ ಅಂಗೀಕಾರ ನೀಡಿರುವುದು ಜನ ವಿರೋಧಿಯಾಗಿದೆ. ಕೇಂದ್ರ ಸರಕಾರ ಜನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಪ್ರತಿಪಕ್ಷಗಳನ್ನು ಹತ್ತಿಕ್ಕುತ್ತಿದೆ ಎಂದು ಕಿಡಿಕಾರಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಎಸ್ ಮಲ್ಲಿಕಾರ್ಜುನ್, ಡಿ.ಬಸವರಾಜ. ಕಲ್ಲೇಶ್ ರಾಜ ಪಟೇಲ್, ಅಬ್ದುಲ್ ಘನಿ ತಾಹೀರ್, ಜಿ.ಸಿ.ನಿಂಗಪ್ಪ ಹದಡಿ, ಬಿ.ಕೆ.ಪರಶುರಾಮ್ ಮಾಗಾನಹಳ್ಳಿ, ಶಾಮನೂರು ಬಸವರಾಜ ಸೇರಿದಂತೆ ಮಹಿಳಾ ಘಟಕದ ಸದಸ್ಯರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News