ದಾವಣಗೆರೆ | ಚಾಕುವಿನಿಂದ ಇರಿದು ಯುವಕನ ಹತ್ಯೆ

Update: 2024-05-16 06:12 GMT

ದಾವಣಗೆರೆ : ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಓಬಜ್ಜಿಹಳ್ಳಿಯ ಹೊರ ವಲಯದಲ್ಲಿ ವರದಿಯಾಗಿದೆ.

ಕೊಲೆಯಾದ ವ್ಯಕ್ತಿಯನ್ನು ಸಂದೀಪ್ (25) ಎಂದು ಗುರುತಿಸಲಾಗಿದೆ. ನಗರದ ಬೂದಾಳ್ ರಸ್ತೆಯ ನಿವಾಸಿಯಾಗಿರುವ ಸುದೀಪ್ ನನ್ನು ದುಷ್ಕರ್ಮಿಗಳು ಕಳೆದ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಆರೋಪಿಗಳ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News