ದಾವಣಗೆರೆ: ಯುವಕನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ

Update: 2024-07-16 06:21 GMT

ದಾವಣಗೆರೆ : ಯುವಕನನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಸೋಮವಾರತಡರಾತ್ರಿ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಬಾಡಾ ರಸ್ತೆಯ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಸಂತೆಬೆನ್ನೂರು ನಿವಾಸಿ ಸಂತೋಷ (32) ಬರ್ಬರವಾಗಿ ಕೊಲೆಯಾದ ಯುವಕ. ಹುಡುಗಿಯ ವಿಚಾರದಲ್ಲಿ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸಂತೋಷನ ಮೇಲೆ ಮೂರು ಜನ ಯುವಕರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಹತ್ಯೆಗೆ ನಿಖರ ಕಾರಣಕ್ಕಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ ಭೇಟಿ ಪರಿಶೀಲನೆ ನಡೆಸಿದರು. ಸಂತೆಬೆನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News