ದಾವಣಗೆರೆ: ಆಹಾರ ನಿರೀಕ್ಷಕ ಡಾ.ನಾಗರಾಜ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ; ಚಿನ್ನ, ನಗದು, ದಾಖಲೆ ವಶ
Update: 2025-03-06 11:35 IST

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಜಿಲ್ಲಾ ಆರೋಗ್ಯ ಇಲಾಖೆಯ ಆಹಾರ ನಿರೀಕ್ಷಕ ಡಾ.ನಾಗರಾಜ್ ಅವರ ನಿವಾಸ, ಕಚೇರಿ, ಫಾರ್ಮ್ಹೌಸ್ ಸೇರಿದಂತೆ ಐದು ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ.
ದಾವಣಗೆರೆ ನಗರದ ನಿಜಲಿಂಗಪ್ಪ ಬಡಾವಣೆಯ ಸರ್ಕಾರಿ ನೌಕರರ ಭವನದ ಬಳಿಯಿರುವ ಡಾ.ನಾಗರಾಜ್ ಅವರ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ, ಇನ್ಸ್ಪೆಕ್ಟರ್ ಪ್ರಭು ನೇತೃತ್ವದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಆಹಾರ ನಿರೀಕ್ಷಕರಿಗೆ ಶಾಕ್ ನೀಡಿದ್ದಾರೆ.
ದಾಳಿಯ ವೇಳೆ ಅಪಾರ ಪ್ರಮಾಣದ ಚಿನ್ನ, ನಗದು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.