ದಾವಣಗೆರೆ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ : 30 ಮಂದಿಯ ಬಂಧನ

Update: 2024-09-20 06:49 GMT

ದಾವಣಗೆರೆ: ಯಾರೇ ಕೋಮುಭಾವನೆ ಕೆರಳಿಸುವ ಹಾಗೂ ಕಾನೂನಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೂರ್ವ ವಲಯ ಐಜಿಪಿ ರಮೇಶ್ ಬಿ. ಹೇಳಿದ್ದಾರೆ.

ದಾವಣಗೆರೆ ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿ ಮೂವತ್ತು ಜನರನ್ನು ಬಂಧಿಸಲಾಗಿದೆ. ರಾತ್ರಿ ಇಡೀ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮೆರವಣಿಗೆ ಅಲ್ಲದೇ ಜನ ವಸತಿ ಪ್ರದೇಶದಲ್ಲಿಯೂ ಸಹ‌ ಕಲ್ಲು ತೂರಾಟ ನಡೆಸಲಾಗಿದೆ. ಈ ಬಗ್ಗೆ ಕೂಡಾ ಎಫ್‌ಐಆರ್ ಆಗಿದೆ ಎಂದು ಮಾಹಿತಿ ನೀಡಿದರು.

ಸಹಜ ಸ್ಥಿತಿಯತ್ತ ದಾವಣಗೆರೆ :

ದಾವಣಗೆರೆ ನಗರದ ಬೇತೂರು ರಸ್ತೆಯಲ್ಲಿರುವ ಅರಳಿಮರ ವೃತ್ತ ಮತ್ತು ವೆಂಕಟೇಶ್ವರ ವೃತ್ತದ ಬಳಿ ಗಣೇಶ ವಿಸರ್ಜನಾ ವೇಳೆ ನಡೆದ ಕಲ್ಲು ತೂರಾಟದ ಘಟನೆಯಿಂದ ಉಂಟಾದ ಪ್ರಕ್ಷುಬ್ಧ ಪರಿಸ್ಥಿತಿ ಹತೋಟಿಗೆ ಬಂದಿದೆ. ದಾವಣಗೆರೆ ಸಹಜ ಸ್ಥಿತಿಯತ್ತ ಬಂದಿದ್ದು, ಘಟನಾ ಸ್ಥಳದಲ್ಕಿ ಅಂಗಡಿ ಮುಗ್ಗಟ್ಟು ಆರಂಭವಾಗಿದೆ. ಜನ ಜೀವನ ಎಂದಿನಂತೆ ಸಹಜ ಸ್ಥಿತಿಗೆ ಮರಳಿದೆ.

ಶುಕ್ರವಾರ ಆದ ಹಿನ್ನೆಲೆ ಹಿನ್ನೆಲೆಯಲ್ಲಿ ಮಸೀದಿಗಳ ಸುತ್ತಲು ಪೊಲೀಸರು ಭದ್ರತೆಯನ್ನು ಒದಗಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News