ಗ್ಯಾರಂಟಿ ಯೋಜನೆಗಳು ಬಿಜೆಪಿ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ : ಬಿ.ಎಸ್.ಯಡಿಯೂರಪ್ಪ

Update: 2024-04-16 09:53 GMT

ದಾವಣಗೆರೆ : ಗ್ಯಾರಂಟಿ ಯೋಜನೆಗಳು ಬಿಜೆಪಿ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಮೋದಿ ಅವರ ಅಲೆ ಮುಂದೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ನಡೆಯುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ಇಂದುನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆ ನಂಬಿಕೊಂಡಿದೆ. ಇದು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶದಲ್ಲಿ ನರೇಂದ್ರ ಮೋದಿಯವರು ಮಾಡಿರುವ ಕೆಲಸ ಕಾರ್ಯಗಳೇ ಜನರು ಮೆಚ್ಚಿದ್ದಾರೆ. ಗ್ಯಾರಂಟಿಗಳಿಗೆ ಜನರು ಮನ್ನಣೆ ನೀಡುವುದಿಲ್ಲ" ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತದ ವಿರುದ್ಧ ಪ್ರತಿನಿತ್ಯ ಟೀಕೆ ಮಾಡುತ್ತಿರುವ ಕಾಂಗ್ರೆಸ್ಸಿಗರು ಮೊದಲು ಪ್ರಧಾನಿ ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಲಿ ಎಂದು ಸವಾಲು ಹಾಕಿದರು.

ಸ್ಥಳೀಯ ಚುನಾವಣೆಗಳನ್ನು ಒಟ್ಟಾಗಿ ಎದುರಿಸುತ್ತೇವೆ

ಪ್ರಧಾನಿ ನರೇಂದ್ರ ಮೋದಿ ಮತ್ತು ದೇವೇಗೌಡರ ನಿರ್ಧಾರದಿಂದ ಮೈತ್ರಿ ಮೂಲಕ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ದೇವೇಗೌಡರ ಅನುಭವ, ಬಿಜೆಪಿಯ ಮೋದಿ ಅಲೆ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈತ್ರಿಯಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಲೋಕಸಭಾ ಚುನಾವಣೆ ಸೇರಿದಂತೆ ಮುಂದೆ ಬರುವ ಸ್ಥಳೀಯ ಚುನಾವಣೆಗಳನ್ನು ಒಟ್ಟಾಗಿ ಎದುರಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೋದಿಯವರು ಮೂರನೇ ಬಾರಿಯೂ ಪ್ರಧಾನಿ ಆಗುತ್ತಾರೆ. ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಗಳನ್ನು ಈಗಾಗಲೇ ರೂಪಿಸಲಾಗಿದೆ. ಈ ಬಾರಿ ಲೋಕಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಸಂಸದ ಜಿ.ಎಂ.ಸಿದ್ದೇಶ್ವರ, ಜಿಲ್ಲಾಧ್ಯಕ್ಷ ಎನ್.ರಾಜಶೇಖರ್, ಹರಿಹರ ಶಾಸಕ ಬಿ.ಪಿ.ಹರೀಶ್, ಹರಿಹರ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಸೇರಿದಂತೆ ಇತರರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News